ಉದಯವಾಹಿನಿ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತ್ಯಾಜ್ಯ ವಿಲೇವಾರಿ ಸಂಬಂಧಿಸಿದಂತೆ ಬೆಂಗಳೂರಿನ ನಾಲ್ಕು ದಿಕ್ಕಿನಲ್ಲಿ ತ್ಯಾಜ್ಯ ಸಂಸ್ಕರಣ ಘಟಕ ಸ್ಥಾಪನೆ ಮಾಡಲು ಭೂಮಿ ಮೀಸಲಿಗೆ ಕಾಲಾವಕಾಶ ನೀಡಿ ಎಂದು ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮನವಿ ಮಾಡಿದೆ.
ಬೆಂಗಳೂರಿನ ತ್ಯಾಜ್ಯ ವಿಲೇವಾರಿ ಕುರಿತಂತೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಪಿಐಎಲ್ ವಿಚಾರಣೆ ಸಂದರ್ಭದಲ್ಲಿ ಬಿಬಿಎಂಪಿ ಕಸ ವಿಲೇವಾರಿಗೆ ಅರ್ಜಿದಾರರ ಪರ ವಕೀಲರು, ಚೆನ್ನೈನಲ್ಲಿ ಕ್ವಾರಿ ಇಂದಾದ ಹಳ್ಳದಲ್ಲಿ ಕುಡಿಯುವ ನೀರನ್ನು ಸಂಗ್ರಹಿಸುತ್ತಾರೆ.ಆದರೆ ಬೆಂಗಳೂರಲ್ಲಿ ತ್ಯಾಜ್ಯ ಸಂಗ್ರಹಿಸಿ ಪರಿಸರವನ್ನು ಹಾಳು ಮಾಡಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಈ ವೇಳೆ ಬೆಂಗಳೂರಿನ ನಾಲ್ಕು ದಿಕ್ಕಿನಲ್ಲಿ ತ್ಯಾಜ್ಯ ಸಂಸ್ಕರಣ ಘಟಕ ಸ್ಥಾಪಿಸಲಾಗುತ್ತದೆ.ಘಟಕ ಸ್ಥಾಪನೆಗೆ ನೂರಾರು ಎಕರೆ ಜಮೀನಿನ ಅವಶ್ಯಕತೆ ಇದೆ ಈ ಬಗ್ಗೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಕಾಲಾವಕಾಶ ಕೋರಿತು.ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ಜೂನ್ ಮೊದಲ ವಾರಕ್ಕೆ ನಿಗದಿಪಡಿಸಿದೆ.

 

Leave a Reply

Your email address will not be published. Required fields are marked *

error: Content is protected !!