ಉದಯವಾಹಿನಿ, ಬೆಂಗಳೂರು: ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರಿನ ಕೇಂದ್ರ ಲೋಕಸಭಾ ಕ್ಷೇತ್ರದಿಂದ ಸ್ವರ್ಧಿಸಲು ಕ್ರೈಸ್ತ ಧರ್ಮದವರಾದ ಬರ್ತಲೋಮಿಯೊ ಅವರಿಗೆ ಟಿಕೆಟ್ ನೀಡಬೇಕೆಂಬುದು ಅಖಿಲ ಕರ್ನಾಟಕ ಕಥೋಲಿಕ ಕ್ರೈಸ್ತರ ಕನ್ನಡ ಸಂಘ ಅಧ್ಯಕ್ಷ ರಪಾಯಲ್ ರಾಜ್ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಬರ್ತಲೋಮಿಯೊ ೩೦ ವರ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇವರ ಪಕ್ಷ ನಿಷ್ಠೆ ಮತ್ತು ಸಮಾಜ ಸೇವೆಯನ್ನು ಪರಿಗಣಿಸಬೇಕು ಹಾಗೂ ಕ್ರೈಸ್ತರಿಗೆ ಬೆಂಗಳೂರಿನ ಕೇಂದ್ರ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಬೇಕೆಂದು ಆಗ್ರಹಿಸಿದರು.
ಶಾಂತಿಯುತವಾಗಿ ಎಲ್ಲ ಚುನಾವಣೆಗಳಲ್ಲೂ ಕ್ರೈಸ್ತ ಧರ್ಮಿಯರಿಗೆ ಸೂಕ್ತ ಸಂಖ್ಯೆಯ ಟಿಕೆಟ್ ನೀಡುವಂತೆ ಮನವಿ ಮಾಡುತ್ತಲೇ ಬಂದಿದ್ದಾರೆ. ಆದಾಗ್ಯೂ ಕಾಂಗ್ರೆಸ್ ಪಕ್ಷ ಸೂಕ್ತ ಅವಕಾಶಗಳನ್ನು ನೀಡಿಲ್ಲ ಎಂಬುದು ದುರಾದೃಷ್ಟಕರ ಸಂಗತಿ ಎಂದರು.
