ಉದಯವಾಹಿನಿ ,ಆನೇಕಲ್ : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಸಂಸದ ಡಿ.ಕೆ ಸುರೇಶ್ ರವರ ಕೊಡುಗೆ ಶೂನ್ಯವಾಗಿದ್ದು, ಗ್ರಾಮ ಪಂಚಾಯಿತಿ ಸದಸ್ಯರು ಮಾಡುವಂತಹ ಚರಂಡಿ, ಬೀದಿ ದೀಪ ಅಳವಡಿಕೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಮಾಡಿರುವುದೇ ಇವರ ದೊಡ್ಡ ಸಾಧನೆಯಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಹುಜನ ಸಮಾಜ ಪಕ್ಷದ ಅಭ್ಯರ್ಥಿ ಡಾ|| ಚಿನ್ನಪ್ಪಚಿಕ್ಕಹಾಗಡೆ ರವರು ಆರೋಫಿಸಿದರು.
ಅವರು ಸರ್ಜಾಪುರದಲ್ಲಿರುವ ಬಹುಜನ ಸಮಾಜ ಪಕ್ಷದ ಕೇಂದ್ರ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಡಿಕೆ ಸುರೇಶ್ ರವರು ಸತತವಾಗಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿ ಗೆದ್ದರು ಸಹ ಕ್ಷೇತ್ರಕ್ಕೆ ಸಂಭಂದಿಸಿದಂತೆ ಯಾವುದೇ ರೀತಿಯ ಶಾಶ್ವತ ಯೋಜನೆಗಳನ್ನು ಜಾರಿಗೆ ತಂದಿಲ್ಲ ಬದಲಾಗಿ ವೇದಿಕೆ ಕಾರ್ಯಕ್ರಮಗಳಲ್ಲಿ ವಿರೋಧ ಪಕ್ಷಗಳನ್ನು ಟೀಕಿಸಿ ಮಧ್ಯಮಗಳಲ್ಲಿ ಸುದ್ದಿಯಾಗಿರುವುದು ಇವರ ಬಹು ದೊಡ್ಡ ಸಾಧನೆಯಾಗಿದೆ ಎಂದರು.
