ಉದಯವಾಹಿನಿ, ಬೆಂಗಳೂರು : ಸಕ್ರೀಯ ರಾಜಕರಾಣದಿಂದ ದೂರ ಉಳಿಯಲು ತೀರ್ಮಾನಿಸಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ವರ್ಷದ ಆಗಸ್ಟ್‍ನಲ್ಲಿ ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದ ಬಚ್ಚೇಗೌಡ ಈಗ ಅಧಿಕೃತವಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದು, ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ನನ್ನ ಸ್ವ ಇಚ್ಛೆಯಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಅಂಗೀಕರಿಸಬೇಕೆಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
2008ರಲ್ಲಿ ಬಿಜೆಪಿ ಪಕ್ಷದಲ್ಲಿ ಪ್ರಾಥಮಿಕ ಸದಸ್ಯತ್ವ ಪಡೆದು ಶಾಸಕನಾಗಿ, ಸಚಿವನಾಗಿ ಮತ್ತು 2019ರಲ್ಲಿ ಸಂಸದನಾಗಿ ಸಾರ್ವಜನಿಕ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಬಿಜೆಪಿ ಪಕ್ಷಕ್ಕೆ ಮತ್ತು ಪಕ್ಷದ ಹಿರಿಯ ಮುಖಂಡರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.
