ಉದಯವಾಹಿನಿ, ಹರಪನಹಳ್ಳಿ, : ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗೆ ತಾಲೂಕಿನಲ್ಲಿ ಎಲ್ಲಾ ರೀತಿಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ(ಅಭಿವೃದ್ಧಿ)ಸಂಸ್ಥೆಯ ಉಪ ನಿರ್ದೇಶಕಿ ಹನುಮಕ್ಕ ತಿಳಿಸಿದರು. ಗುರುವಾರ ತಾಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮತನಾಡಿದ ಅವರು ತಾಲೂಕಿನಲ್ಲಿ ಒಟ್ಟು 13 ಪರೀಕ್ಷಾ ಕೇಂದ್ರಗಳಿದ್ದು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ, ಶುದ್ದ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಆಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಾಣಾಧಿಕಾರಿ ಯು.ಬಸವರಾಜಪ್ಪ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಕೆ.ಷಣ್ಮುಖಪ್ಪ ಬಿಆರ್‍ಸಿ ಹೋನ್ನೆತೇಪ್ಪ, ಶಿಕ್ಷಣ ಸಂಯೋಜಕಿ ಲಕ್ಷ್ಮೀರಂಗಣ್ಣನವರ್ ಸೇರಿದಂತೆ ಇತರರು ಇದ್ದರು.
