ಉದಯವಾಹಿನಿ, ರಾಯಚೂರು: ಲೋಕಸಭಾ ಚುನಾವಣೆಯನ್ನು ಅತ್ಯಂತ ಯಶಸ್ವಿಯಾಗಿ ಮತ್ತು ಅಚ್ಚುಕಟ್ಟಾಗಿ ನಿರ್ವಹಿಸಲು ಪೊಲೀಸರು ನಗರದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಿದರು.
ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ನಿಖಿಲ್ ಬಿ ನೇತೃತ್ವದಲ್ಲಿ ಪಥ ಸಂಚಲನ ನಡೆಯಿತು.
ಶಾಂತಿ,ಸುವ್ಯವಸ್ಥಿತವಾಗಿ ಚುನಾವಣೆ ನಡೆಸುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಧೈರ್ಯ ತುಂಬಿ, ಚುನಾವಣಾ ಜಾಗೃತಿ ಮೂಡಿಸುವ ಸಲುವಾಗಿ ಹಾಗೂ ಮುಂಜಾಗ್ರತೆಯ ಕ್ರಮವಾಗಿ ಈ ಪಥ ಸಂಚಲನ ನಡೆಯಿತು. ಲೋಕಸಭಾ ಚುನಾವಣೆ ನಿಮಿತ್ಯ ರಾಯಚೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ಆಗದಂತೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಭದ್ರತೆ ಪಡೆಗಳಿಂದ ಸಂಚಲನ ಜಾಗೃತಿ ನಡೆಯಿತು.
