ಉದಯವಾಹಿನಿ, ಆನೇಕಲ್ : ಲೋಕಸಭೆ ಚುನಾವಣೆ ಅಂಗವಾಗಿ ಆನೇಕಲ್ ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ದೊಮ್ಮಸಂದ್ರ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಸಾರ್ವಜನಿಕರಿಗೆ ಹಾಗೂ ಯುವ ಮತದಾರರಿಗೆ ಮತದಾನದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಕಕ್ಕೆ ಆನೇಕಲ್ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಸಿ.ಎಸ್.ಶ್ರೀನಾಥ್ ಗೌಡರು ಚಾಲನೆ ನೀಡಿದರು.
ಮತದಾನ ಮಹತ್ವವನ್ನು ತಿಳಿಸಿಕೊಟ್ಟರು ಹಾಗೆಯೇ ಪ್ರತಿಜ್ಞಾ ವಿಧಿಯನ್ನು ಬೋದಿಸಲಾಯಿತು. ಕಾರ್ಯಕ್ರಮದಲ್ಲಿ ದೊಮ್ಮಸಂದ್ರ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮಂಜುನಾಥ ರೆಡ್ಡಿ, ಸ್ವೀಪ್ ಸಮಿತಿಯ ಕೆ,ಚಂದ್ರಶೇಖರ್, ನಾಗರಾಜ್, ಹರೀಶ್, ಮುಖ್ಯ ಶಿಕ್ಷಕರಾದ ರಾಮಕೃಷ್ಣಯ್ಯ, ಶಿಕ್ಷಕರಾದ ನಾಗರಾಜ್ ಮುಂತಾದವರು ಹಾಜರಿದ್ದರು.
