ಉದಯವಾಹಿನಿ, ಮೈಸೂರು : ನುಡಿದಂತೆ ನಡೆದ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುತ್ತದೆ ಎಂಬ ವಿಶ್ವಾಸವಿದ್ದು, ಈ ಬಾರಿ ರಾಜ್ಯದ 20 ಲೋಕಸಭಾ ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿಇ, ಅಭ್ಯರ್ಥಿ ಆಯ್ಕೆಯಲ್ಲಿ ಯಾವುದೇ ಕಗ್ಗಂಟಿಲ್ಲ. ರಾಜ್ಯದ ಉಳಿದ 4 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಯಾವುದೇ ಕಗ್ಗಂಟಿಲ್ಲ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ನಾವು ಬಿಜೆಪಿ ಪಕ್ಷದವರ ಹಾಗೆ 28 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂಬ ಸುಳ್ಳು ಹೇಳುವುದಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಮೈಸೂರು , ಚಾಮರಾಜನಗರ ಕ್ಷೇತ್ರವನ್ನೂ ಸೇರಿಸಿದಂತೆ ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದನ್ನು ಕಾಂಗ್ರೆಸ್ ಪ್ರತಿಷ್ಠೆಯಾಗಿ ತೆಗೆದುಕೊಳ್ಳಲಿದೆ ಎಂದರು.
ಸುಳ್ಳು ಹೇಳುವುದಿಲ್ಲ:
ಗ್ಯಾರಂಟಿಯೋಜನೆಗಳು ಕಾಂಗ್ರೆಸ್ ಪಕ್ಷದ ನೆರವಿಗೆ ಬರಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ನಮ್ಮ ಸರ್ಕಾರ ನುಡಿದಂತೆ ನಡೆದಿದ್ದು, ಜನರಿಗೆ ನೀಡಿದ ಭರವಸೆಗಳನ್ನು ಅಧಿಕಾರಕ್ಕೆ ಬಂದ ಕೂಡಲೇ ಜಾರಿಗೊಳಿಸಲಾಗಿದೆ. ಗ್ಯಾರಂಟಿಗಳಿಗೆ ಈ ವರ್ಷ 36000 ಕೋಟಿ ಹಾಗೂ ಮುಂದಿನ ವರ್ಷ 52009 ಕೋಟಿ ರೂ.ಗಳನ್ನು ವೆಚ್ಚ ಮಾಡಲಿದ್ದೇವೆ. ಬಿಜೆಪಿಯವರಂತೆ ಸುಳ್ಳು ಹೇಳದೇ , ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದರು. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಮಾಡಿರುವ ಸಾಧನೆಗಳ ಆಧಾರದ ಮೇಲೆ ಚುನಾವಣೆಯನ್ನು ಎದುರಿಸಲಿದ್ದು, ಜನತೆ ವಿಧಾನಸಭಾ ಚುನಾವಣೆಯಂತೆ ನಮ್ಮ ಪಕ್ಷದ ಕೈ ಹಿಡಿಯಲಿದ್ದಾರೆ. ನುಡಿದಂತೆ ನಡೆದ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುತ್ತದೆ ಎಂಬ ವಿಶ್ವಾಸವಿದೆ ಎಂದರು.

Leave a Reply

Your email address will not be published. Required fields are marked *

error: Content is protected !!