ಉದಯವಾಹಿನಿ, ವಿಜಯಪುರ: ರಸ್ತೆ ಪಕ್ಕಕ್ಕೆ ಉರುಳಿ ಬಿದ್ದ ಪರಿಣಾಮ ಸ್ಪಿರಿಟ್ ತುಂಬಿದ ಟ್ಯಾಂಕರ್ ಗೆ ಬೆಂಕಿ ಹೊತ್ತಿಕೊಂಡು ಧಗಧಗನೆ ಹೊತ್ತಿ ಉರಿದ ಘಟನೆ ಜಿಲ್ಲೆಯ ಸಿಂದಗಿ ಪಟ್ಟಣದ ಹೊರಭಾಗದ ಕಲಬುರಗಿ ಹೆದ್ದಾರಿ ಬಳಿ ನಡೆದಿದೆ.
ಚಲಿಸುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ನೋಡು ನೋಡುತ್ತಿದ್ದಂತೆಯೇ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೆಂಕಿ ಕೆನ್ನಾಲಿಗೆ ಚಾಚಿದೆ. ಇಡೀ ಟ್ಯಾಂಕರ್ ಗೆ ಬೆಂಕಿ ವ್ಯಾಪಿಸಿ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಚಾಲಕ, ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿಯ ಕೆನ್ನಾಲಿಗೆ ನಂದಿಸಲು ಹರಸಾಹಸ ಪಟ್ಟಿದ್ದಾರೆ.
ಸಿಂದಗಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
