ಉದಯವಾಹಿನಿ, ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ವಿಶೇಷ ಚೇತನರ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ವಿಧಾನಸೌಧದ ಪೂರ್ವದ್ವಾರದ ಅದ್ದೂರಿ ಮೆಟ್ಟಿಲುಗಳ ಮುಂಭಾಗದಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ವಿಶೇಷ ಚೇತನರ ದ್ವೀಚಕ್ರ/ತ್ರಿಚಕ್ರ ವಾಹನಗಳ ಜಾಥಾ ಕಾರ್ಯಕ್ರಮಕ್ಕೆ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ಚಾಲನೆ ನೀಡಿದರು.
ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತರ ತುಷಾರ್ ಗಿರಿ ನಾಥ್ ಅವರು ಮತದಾನದ ಪ್ರತಿಜ್ಞಾವಿಧಿ ಬೋದಿಸಿದರು.
ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ಅಪರ ಮುಖ್ಯ ಚುನಾವಣಾಧಿಕಾರಿ ಕೂರ್ಮ ರಾವ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ವಿಧಾನಸೌಧದ ಅದಿರಿ ಮೆಟ್ಟಿಲು ಮೆಟ್ಟಿಲುಗಳ ನಿಂದ ಕಂಠೀರವ ಕ್ರೀಡಾಂಗಣದವರೆಗೆ ವಿಶೇಷ ಚೇತನರ ದ್ವೀಚಕ್ರ/ತ್ರಿಚಕ್ರ ವಾಹನಗಳ ಜಾಥಾ ನಡೆಯಿತು.

Leave a Reply

Your email address will not be published. Required fields are marked *

error: Content is protected !!