ಉದಯವಾಹಿನಿ , ಬೆಂಗಳೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಏಪ್ರಿಲ್ ೩ ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಏಪ್ರಿಲ್ ೩ ರಂದು ಬೆಳಗ್ಗೆ ೧೦:೩೦ ಕ್ಕೆ ಮೆರವಣಿಗೆ ಮೂಲಕ ಸಾಗಿ ನಾಮಪತ್ರ ಸಲ್ಲಿಸಲಾಗುವುದು. ದೊಡ್ಡ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಗಮಿಸುವಂತೆ ಯದುವೀರ್ ಮನವಿ ಮಾಡಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಡಿರುವ ಅವರು ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಆರಂಭವಾಗಲಿದ್ದು, ನಾಮಪತ್ರ ಸಲ್ಲಿಕೆ ಸ್ಥಳಕ್ಕೆ ತೆರಳಲಿದೆ. ಮೈಸೂರು-ಕೊಡಗಿನ ಸಮಸ್ತ ಜನತೆ ಈ ಕಾರ್ಯಕ್ರಮಕ್ಕೆ ಆಗಮಿಸಿ ನಿಮ್ಮ ಉಪಸ್ಥಿತಿಯಿಂದ ಆಶೀರ್ವದಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.
ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಇದೇ ಕ್ಷೇತ್ರದಲ್ಲಿ ಎರಡು ಬಾರಿ ಸಂಸದರಾಗಿ ಕಾರ್ಯನಿರ್ವಹಿಸಿದ್ದ ಸಂಸದ ಪ್ರತಾಪ್ ಸಿಂಹ ಅವರಿಗೆ ಮೂರನೇ ಬಾರಿಗೆ ಟಿಕೆಟ್ ಮಿಸ್ ಆಗಿದೆ.
ಪ್ರತಿಷ್ಠೆಯ ಕಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿಕೊಳ್ಳುವ ಜವಾಬ್ದಾರಿ ಹೆಗಲ ಮೇಲಿದ್ದು ಹೀಗಾಗಿ ಅವರಿಗೆ ಪ್ರತಿಷ್ಠೆಯ ಕಣವಾಗಿದೆ. ಕಾಂಗ್ರೆಸ್ ಪಕ್ಷದಿಂದ ಎಂ. ಲಕ್ಷ್ಮಣ್ ಅವರಿಗೆ ಟಿಕೆಟ್ ನೀಡಲಾಗಿದೆ.
