ಉದಯವಾಹಿನಿ, ಬೆಂಗಳೂರು: ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀಮತಿ ಸೌಮ್ಯರೆಡ್ಡಿರವರ ಲಾಲ್ ಭಾಗ್ ಅವರಣದಲ್ಲಿ ಮತಯಾಚನೆ ಮಾಡಿದರು, ಇದೇ ಸಂದರ್ಭದಲ್ಲಿ ಬಿಜೆಪಿ ಮಹಿಳಾ ತೇಜಸ್ವಿನಿ ಆನಂತ್ ಕುಮಾರ್ ರವರು ಮುಖಾಮುಖಿಯಾದರು
ಆಡಳಿತ ಪಕ್ಷದ ಮಾಜಿ ನಾಯಕ ಎನ್.ನಾಗರಾಜು ಮತ್ತು ಶ್ರೀಮತಿ ಮಮತಾ ದೇವರಾಜ್ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದರುಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸಂವಿಧಾನ ಪ್ರತಿಯೊಬ್ಬ ನಾಗರಿಕರಿಗೆ ಮತದಾನದ ಹಕ್ಕು ನೀಡಿದೆ.ಚುನಾವಣೆ ಹಬ್ಬದಲ್ಲಿ ಮತದಾನ ಮಾಡುವ ಪವಿತ್ರ ಕಾರ್ಯದಲ್ಲಿ ಪ್ರತಿಯೊಬ್ಬ ಮತದಾರರು ತಪ್ಪದೆ ಮತದಾನ ಮಾಡಬೇಕು.
ಕಾಂಗ್ರೆಸ್ ಪಕ್ಷ ಚುನಾವಣೆ ಪೂರ್ವದಲ್ಲಿ ನೀಡಿದ್ದ ೫ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತಂದಿದೆ.
ಶಕ್ತಿ ಯೋಜನೆಯಿಂದ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ, ಮನೆಯ ಯಾಜಮಾನಿಗೆ ೨೦೦೦ಸಾವಿರ ಸಹಾಯಧನ ಮತ್ತು ಅನ್ನಭಾಗ್ಯ , ೨೦೦ಯೂನಿಟ್ ವಿದ್ಯುತ್ ಉಚಿತ, ಯುವನಿಧಿ ನಿರುದ್ಯೋಗ ಯುವ ಸಮೂಹಕ್ಕೆ ಸಹಾಯಧನ.ರಾಜ್ಯದ ಪ್ರತಿ ಕುಟಂಬಕ್ಕೆ ಗ್ಯಾರಂಟಿ ಯೋಜನೆ ತಲುಪಿದೆ. ಅಭಿವೃದ್ದಿಯೆ ಸಂಕೇತವಾಗಿರುವ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಮತಯಾಚನೆ ಮಾಡುತ್ತಿದ್ದೇವೆ.ಸೋಮವಾರ ಬೆಳಗ್ಗೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಮುಖಂಡರು ಕಾರ್ಯಕರ್ತರ ಜೊತೆಯಲ್ಲಿ ನಾಮಪತ್ರ ಸಲ್ಲಿಸುತ್ತಿದ್ದೇನೆ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀಮತಿ ಸೌಮ್ಯರೆಡ್ಡಿರವರು ಹೇಳಿದರು.

Leave a Reply

Your email address will not be published. Required fields are marked *

error: Content is protected !!