ಉದಯವಾಹಿನಿ, ಶಿಡ್ಲಘಟ್ಟ: ತಾಲ್ಲೂಕಿನಾದ್ಯಂತ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಿಬ್ಬಂದಿಯಿಂದ ಹಾಗೂ ಸಾರ್ವಜನಿಕರಿಂದ ರಂಗೋಲಿ ಹಾಕುವ ಮೂಲಕ ಮತದಾನದ ಬಗ್ಗೆ ಅರಿವು ಮತ್ತು ಜಾಗೃತಿ ಮತ್ತು ಪ್ರತಿಜ್ಞಾವಿಧಿಯನ್ನು ಸ್ವೀಪ್ ಸಮಿತಿ ಅದ್ಯಕ್ಷರಾದ ಮುನಿರಾಜು ನೇತೃತ್ವದಲ್ಲಿ ಭೋದಿಸಲಾಯಿತು.
ತಾಲ್ಲೂಕಿನಲ್ಲಿ ಸ್ವೀಪ್ ಸಮಿತಿ ವತಿಯಿಂದ ತಾಲ್ಲೂಕಿನಾದ್ಯಂತ ೨೦೨೪ ರ ಲೋಕಸಭೆಯ ಚುನಾವಣೆಯಲ್ಲಿ ಹೆಚ್ಚು ಮತದಾನ ಮಾಡುವ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ರಂಗೋಲಿ ಸ್ಪರ್ಧೆ ಹಾಗೂ ಜಾಥಾ ಮಾಡುವ ಮೂಲಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ಚುನಾವಣೆಗಳಲ್ಲಿ ಕಡ್ಡಾಯವಾಗಿ ಭಾಗವಹಿಸಿ ಮತದಾನ ಮಾಡುವ ಮೂಲಕ ಮತ್ತಷ್ಟು ಗಟ್ಟಿಗೊಳಿಸಬೇಕೆಂದು ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಮುನಿರಾಜ ಕರೆ ನೀಡಿದರು.
ಶಿಡ್ಲಘಟ್ಟ ತಾಲ್ಲೂಕಿನಾದ್ಯಂತ ಇರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರು ಮತ್ತು ಸಿಬ್ಬಂದಿ ಜೊತೆಗೂಡಿ ಮತದಾನದ ಅರಿವು ಮೂಡಿಸುವ ಕಾರ್ಯಕ್ರಮ ಮತ್ತು ಜಾಗೃತಿ ಮೂಡಿಸಲು ರಂಗೋಲಿ ಹಾಕುವ ಮೂಲಕ ಪ್ರತಿಯೊಬ್ಬರು ಮತದಾನ ವ್ಯವಸ್ಥೆಯನ್ನು ಬಲಿಷ್ಠ ಗೊಳಿಸಬೇಕು ಎಂದರು.
ಪ್ರಜಾಪ್ರಭುತ್ವದಲ್ಲಿ ೧೮ ವರ್ಷ ಮೇಲ್ಪಟ್ಟ ಯುವಕ, ಯುವತಿಯರು ಕಡ್ಡಾಯವಾಗಿ ತಮ್ಮ ತಮ್ಮ ಹೆಸರುಗಳನ್ನು ಮತದಾರ ಪಟ್ಟಿಯಲ್ಲಿ ನೋಂದಣಿ ಮಾಡಿಸಲು ಆದ್ಯತೆ ನೀಡಬೇಕು ಸಂವಿಧಾನಾತ್ಮಕವಾಗಿ ದೊರೆತಿರುವ ಹಕ್ಕನ್ನು ಚಲಾಯಿಸಿ ಒಳ್ಳೆಯ ಜನಪ್ರತಿನಿಧಿಗಳನ್ನು ಆರಿಸಿಕೊಳ್ಳಬೇಕೆಂದರು.
ಮತದಾನ ಅಮೂಲ್ಯವಾಗಿದ್ದು ಮತದಾರರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಮತದಾನ ಮಾಡಬೇಕು ವಿಶೇಷವಾಗಿ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಲು ಎಲ್ಲರೂ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಬಂಧಪಟ್ಟ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರು, ಗ್ರಾಮ ಪಂಚಾಯಿತಿ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಸ್ವಸಹಾಯ ಸಂಘದವರು ಸೇರಿದಂತೆ ಇತರರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!