ಉದಯವಾಹಿನಿ, ಅಥಣಿ : ದೇಶಾದ್ಯಂತ ಲೋಕಸಭಾ ಚುನಾವಣೆ ಕಾವು ರಂಗೇರಿದ್ದು, ಈ ಬಾರಿ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂದು ಕಾಂಗ್ರೆಸ್ ಭರ್ಜರಿ ಸಿದ್ಧತೆಯಲ್ಲಿ ತೊಡಗಿದೆ. ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಘೋಷಣೆಯಾಗಿದ್ದು ಪ್ರಚಾರ, ಸಭೆಗಳು ಶುರುವಾಗಿವೆ. ಈಗ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು. ಅದರಲ್ಲಿ ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿ ಸೇರಿದಂತೆ ಕಾಂಗ್ರೆಸ್ 40 ಘಟಾನುಘಟಿ ನಾಯಕರನ್ನ ಹೆಸರನ್ನು ಸ್ಟಾರ್ ಕ್ಯಾಂಪೇನರ್ ಪಟ್ಟಿಯನ್ನು ಪ್ರಕಟಿಸಿದೆ.

Leave a Reply

Your email address will not be published. Required fields are marked *

error: Content is protected !!