
ಉದಯವಾಹಿನಿ, ಕೆಂಗೇರಿ: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಸಮ್ಮುಖದಲ್ಲಿ ಲಕ್ಷ್ಮೀದೇವಿ ನಗರದ ೫೦ಕ್ಕೂ ಹೆಚ್ಚು ಮಹಿಳೆಯರು ಹಾಗೂ ಯುವಕರು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾದರು.
ಶಾಸಕ ಮುನಿರತ್ನ ಮಾತನಾಡಿ ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಪಕ್ಷದ ಮೇಲೆ ಜನರಿಗೆ ವಿಶ್ವಾಸ ಹೆಚ್ಚಾಗಿದ್ದು, ಆದ್ದರಿಂದಲೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಆಗುವವರ ಸಂಖ್ಯೆ ಹೆಚ್ಚಾಗುತ್ತಿದೆ ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಸುಳ್ಳು ಭರವಸೆ ನೀಡಿ ರಾಜ್ಯವನ್ನು ಅಧೋಗತಿಗೆ ಕೊಂಡುಯ್ಯುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನ ಬೇಸತ್ತಿದ್ದಾರೆ’ ಎಂದರು.
ಮಹಿಳೆಯರು ಮತ್ತು ಯುವಕರು ಮಾತನಾಡಿ ಬಿಜೆಪಿ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆ
ಯಾಗಿದ್ದೇವೆ ಶಾಸಕರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ತಿಳಿಸಿದರು.
