ಉದಯವಾಹಿನಿ, ಮೈಸೂರು : ಟಿ.ಕೆ ಲೇಔಟ್ ನಲ್ಲಿರುವ ಶ್ರೀ ಕೃಷ್ಣಧಾಮದಲ್ಲಿ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ವತಿಯಿಂದ ಅಯೋಧ್ಯೆಯಲ್ಲಿ ಬಾಲರಾಮಚಂದ್ರ ದೇವರನ್ನು ಪ್ರತಿಷ್ಠಾಪನೆ ಮಾಡಿ, 48 ದಿನಗಳ ಮಂಡಲೋತ್ಸವ ಹಾಗೂ ಮಂಗಳೋತ್ಸಮ ಯಶಸ್ವಿಯಾಗಿ ಪೂರೈಸಿ ಮೈಸೂರಿಗೆ ಆಗಮಿಸಿದ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥರಿಗೆ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್ ರವರ ನೇತೃತ್ವದಲ್ಲಿ ಶ್ರೀಗಳಿಗೆ ಗುರುವಂದನೆ ಸಲ್ಲಿಸಿದರು.
ನಂತರ ಮಾತನಾಡಿದ ಡಿ ಟಿ ಪ್ರಕಾಶ್ ಅವರು ಹಿಂದುಗಳ ಪಾಲಿನ ಅತ್ಯಂತ ಪವಿತ್ರ ತೀರ್ಥಕ್ಷೇತ್ರವಾದ ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆಯ ನಂತರ ಪೇಜಾವರ ಮಠಾಧೀಶರಾದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀ ಪಾದರ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ಜನವರಿ 30 ರಿಂದ ಮಾರ್ಚ್ 11 ವರೆಗೆ ಶ್ರದ್ಧಾಭಕ್ತಿಯಿಂದ ಮಂಡಲ ಪೂಜೆ ನೆರವೇರಿ ಇದೆ.
ಇದೀಗ ಆ ಪವಿತ್ರ ಕ್ಷೇತ್ರದಿಂದ ಆಗಮಿಸಿರುವ ಶ್ರೇಷ್ಠ ಸಂತರಾದ ಶ್ರೀಗಳಿಗೆ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಎಲ್ಲಾ ಪದಾಧಿಕಾರಿಗಳ ಪರವಾಗಿ ಅಭಿನಂದನೆಗಳು,ಅಯೋಧ್ಯೆಯಲ್ಲಿ ರಾಮದೇವರ ಪ್ರತಿಷ್ಠೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಪಕ್ಕದಲ್ಲಿ ನಿಂತು ಪ್ರತಿಮೆಗೆ ಪ್ರಾಣ ಪ್ರತಿಷ್ಠೆ ಮಾಡಿದ ಪೇಜಾವರ ಶ್ರೀಗಳನ್ನು ಕಂಡು ಕನ್ನಡಿಗರು ರೋಮಾಂಚನಗೊಂಡಿದ್ದರು. ಸಾಂಸ್ಕೃತಿಕ ಪುನರುತ್ಥಾನದ ಕಾಲಘಟ್ಟದಲ್ಲಿ ಶ್ರೀಗಳ ಈ ಮಹತ್ವದ ಪಾತ್ರ ಎಲ್ಲರ ಗಮನ ಸೆಳೆದಿತ್ತು ಎಂದರು. ಇದೇ ಸಂದರ್ಭದಲ್ಲಿ ಹೋಟೆಲ್ ಮಾಲೀಕರ ಸಂಘದ ರಾಜ್ಯ ಉಪಾಧ್ಯಕ್ಷರಾದ ರವಿ ಶಾಸ್ತ್ರಿ, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಉದ್ಯಮಿ ಅಪೂರ್ವ ಸುರೇಶ್, ಡಾಕ್ಟರ್ ಕೆ ಚಕ್ರಪಾಣಿ, ಎಸ್ ಬಿ ವಾಸುದೇವಮೂರ್ತಿ, ಮಿರ್ಲೆ ಪನೀಶ್, ಸುಚಿಂದ್ರ, ಮಂಜುನಾಥ್, ಹಾಗೂ ಇನ್ನಿತರ ಭಕ್ತಾದಿಗಳು ಹಾಜರಿದ್ದರು

Leave a Reply

Your email address will not be published. Required fields are marked *

error: Content is protected !!