ಉದಯವಾಹಿನಿ, ಬೆಂಗಳೂರು: ತಮ್ಮ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳಿಂದ ತಮ್ಮ ಪಕ್ಷಕ್ಕೆ ಲೋಕಸಭೆ ಚುನಾವಣೆಯಲ್ಲಿ ಜನ ಸಾಮಾನ್ಯರು ಅದರಲ್ಲಿ ವಿಶೇಷವಾಗಿ ಮಹಿಳೆಯರ ಬೆಂಬಲ ಸಿಕ್ಕೇ ಸಿಗುತ್ತದೆ ಎಂದು ಕಾಂಗ್ರೆಸ್ ವಿಶ್ವಾಸದಲ್ಲಿದೆ. ಮತ್ತೊಂದೆಡೆ ಬಿಜೆಪಿಯಲ್ಲಿ ಅಸಮಾಧಾನಗೊಂಡಿರುವ ನಾಯಕರ ಬೆಂಬಲವನ್ನು ಸದ್ದಿಲ್ಲದೆ ಕಾಂಗ್ರೆಸ್ ಪಡೆಯುತ್ತಿದೆ.

ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಸೇರಿದಂತೆ ಬಿಜೆಪಿ ಮುಖಂಡರು ಬೆಂಗಳೂರು ಉತ್ತರದಲ್ಲಿ ಶೋಭಾ ಕರಂದ್ಲಾಜೆ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜೇಗೌಡ ಅವರಿಗೆ ಸಹಾಯ ಮಾಡುವ ಸಾಧ್ಯತೆಯಿದೆ. ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಉತ್ತರ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರನ್ನು ಬೆಂಬಲಿಸಬಹುದು.ಇತ್ತೀಚೆಗಷ್ಟೇ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಸೋಮಶೇಖರ್‌ ಕಾಂಗ್ರೆಸ್‌ಗೆ ಮತ ಹಾಕಿದ್ದು, ಹೆಬ್ಬಾರ್‌ ಅವರು ಅನಾರೋಗ್ಯ ಕಾರಣ ಹೇಳಿ ತಮ್ಮ ಹಕ್ಕು ಚಲಾಯಿಸುವಿಕೆಯಿಂದ ದೂರವುಳಿದಿದ್ದರು ಈ ಇಬ್ಬರು ನಾಯಕರು ತಮ್ಮ ಬೆಂಬಲಿಗರನ್ನು ಭೇಟಿ ಮಾಡಿ ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲ ನೀಡದಿರಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.ಲೋಕಸಭೆ ಚುನಾವಣೆ: ಶೋಭಾ ಕರಂದ್ಲಾಜೆ, ಸುನೀಲ್ ಬೋಸ್, ಕೆ ಜಯಪ್ರಕಾಶ್ ಹೆಗ್ಡೆ ಸೇರಿ ಹಲವರು ನಾಮಪತ್ರ ಸಲ್ಲಿಕೆ
ಸೋಮಶೇಖರ್ ಮಾತ್ರವಲ್ಲ, ಬೆಂಗಳೂರಿನ ಹಲವು ಬಿಜೆಪಿ ನಾಯಕರು ಶೋಭಾ ಕರಂದ್ಲಾಜೆ ಈ ಪ್ರದೇಶದಲ್ಲಿ ಪ್ರಬಲ ಒಕ್ಕಲಿಗ ನಾಯಕಿಯಾಗಿ ಹೊರಹೊಮ್ಮುವುದನ್ನು ಬಯಸುವುದಿಲ್ಲ ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.ಹಳೇ ಮೈಸೂರು ಭಾಗದಲ್ಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಲೋಕಸಭೆ ಚುನಾವಣೆ ನಂತರ ತಮ್ಮ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ ಹಣ ನೀಡುವ ಭರವಸೆ ನೀಡುವ ಮೂಲಕ ಬಿಜೆಪಿಯ ಕೆಲ ಶಾಸಕರಿಗೆ ತಟಸ್ಥವಾಗಿರುವಂತೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.ತುಮಕೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿಷ್ಠಾವಂತರಾಗಿದ್ದ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಇತ್ತೀಚೆಗೆ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ನಾಮಪತ್ರ ಸಲ್ಲಿಕೆ ವೇಳೆ ಗೈರಾಗಿದ್ದರು. ಅವರನ್ನು ತುಮಕೂರು ಕ್ಷೇತ್ರದಿಂದ ದೂರವಿಟ್ಟು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸ್ಥಾನದ ಉಸ್ತುವಾರಿ ನೀಡಲಾಗಿದೆ.

ಪುತ್ರನಿಗೆ ಬೆಂಗಳೂರು ಉತ್ತರ ಲೋಕಸಭಾ ಟಿಕೆಟ್ ಕೊಡಿಸಲು ಸೋಮಶೇಖರ್ ಕಸರತ್ತು! ಒಂದು ವೇಳೆ ಟಿಕೆಟ್ ಸಿಗದಿದ್ದರೆ…?10-12 ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಿರುವ 15 ಜಿಲ್ಲೆಗಳಲ್ಲಿ ಶೇ 70ರಷ್ಟು ಫಲಾನುಭವಿಗಳಿದ್ದಾರೆ. ಸರ್ಕಾರದ ಐದು ಗ್ಯಾರಂಟಿ ಎಫೆಕ್ಟ್ ಮೇಲೆ ಸಮೀಕ್ಷೆ ನಡೆಸಲಾಗಿದೆ. ಚುನಾವಣೆಗೆ ಹೇಗೆ ಕಾರ್ಯತಂತ್ರ ರೂಪಿಸಬೇಕು ಎಂಬುದರ ಕುರಿತು ಕಾಂಗ್ರೆಸ್‌ಗೆ ಸುಳಿವು ನೀಡಿದೆ.ಆದರೆ ಸಮೀಕ್ಷೆ ಮಂದಗತಿಯಲ್ಲಿ ಸಾಗಿರುವ ಬೆಂಗಳೂರು ಸೇರಿದಂತೆ ಉಳಿದ ಕ್ಷೇತ್ರಗಳಲ್ಲಿ ಯಾವುದೇ ಸುಳಿವಿಲ್ಲ. ಅದಕ್ಕಾಗಿಯೇ ಕಾಂಗ್ರೆಸ್ ಪಕ್ಷ ವಿಶೇಷವಾಗಿ ಶಿವಕುಮಾರ್ ನಾಯಕತ್ವವು ‘ಆಪರೇಷನ್ ಹಸ್ತ’ ನಡೆಸುತ್ತಿದೆ, ಬಿಜೆಪಿ ಮತ್ತು ಜೆಡಿಎಸ್‌ನಿಂದ ಸ್ಥಳೀಯ ನಾಯಕರನ್ನು ಸೇರಿಸಿಕೊಳ್ಳುತ್ತಿದೆ ಮತ್ತು ಬಿಜೆಪಿ ನಾಯಕರ ಬೆಂಬಲ ಪಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!