ಉದಯವಾಹಿನಿ, ಸಿರುಗುಪ್ಪ : ಭಾರತವು ವೈವಿದ್ಯತೆಯಿಂದ ಕೂಡಿದ ರಾಷ್ಟ್ರವಾ ಲಗಿದ್ದು, ಸಾರ್ವಜನಿಕರಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಅವಶ್ಯವಾಗಿದೆ ಎಂದು ತಾ.ಪಂ.ಇ.ಒ. ಪವನ್‌ಕುಮಾರ್ ತಿಳಿಸಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ತಾಲೂಕು ಆಡಳಿತ, ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮತದಾನಕ್ಕೆ ಸಂವಿಧಾನದಲ್ಲಿ ವಿಶೇಷವಾದ ಅರ್ಥವಿದೆ, ಪ್ರಸ್ತುತ ಅನಕ್ಷರಸ್ಥರು, ಬಡವರು, ಸಮಾಜದ ಕೆಳವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುತ್ತಿದ್ದಾರೆ. ಆದರೆ ಬುದ್ದಿಜೀವಿಗಳು, ಅಕ್ಷರಸ್ಥರು ಮತದಾನಕ್ಕೆ ಮುಂದಾಗದಿರುವುದು ಆತಂಕದ ಸಂಗತಿಯಾಗಿದೆ.
ಪ್ರಜಾಪ್ರಭುತ್ವದಲ್ಲಿ ಸರಿಯಾದ ವ್ಯಕ್ತಿ ಆಯ್ಕೆಯಾದರೆ ಉತ್ತಮ ಸರ್ಕಾರ ಆಯ್ಕೆಯಾಗುತ್ತದೆ. ಇದರಿಂದ ಉತ್ತಮ ಸಮಾಜ ನಿರ್ಮಾಣವಾಗುತ್ತದೆ, ಉತ್ತಮ ಸರ್ಕಾರ ಆಯ್ಕೆಮಾಡಲು ಎಲ್ಲರು ಮತದಾನಕ್ಕೆ ಮುಂದಾಗಬೇಕು, ದಾನ ಎನ್ನುವುದು ಪವಿತ್ರವಾದುದ್ದು, ಅದು ಇಂದು ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿರುವುದು ಆತಂಕಕಾರಿಯಾಗಿದೆ. ಇದನ್ನು ನಿಯಂತ್ರಿಸಲು ಮತ್ತು ತಮ್ಮದೇ ಸರ್ಕಾರ ಆಯ್ಕೆ ಮಾಡಲು ಮತದಾನ ಅಗತ್ಯವಾಗಿದೆ, ನಿರ್ಭೀತಿಯಿಂದ ಯಾವುದೇ ಆಮಿಷಕ್ಕೆ ಒಳಗಾಗದೇ ಮತದಾನ ಮಾಡಿದರೆ ಪ್ರಜಾಪ್ರಭುತ್ವಕ್ಕೆ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದರು.
ಪೌರಾಯುಕ್ತ ಗುರುಪ್ರಸಾದ್, ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಸಂಘಸಂಸ್ಥೆಗಳ ಪ್ರತಿನಿಧಿಗಳು, ಸಾರ್ವಜನಿಕರು ಇದ್ದರು.

Leave a Reply

Your email address will not be published. Required fields are marked *

error: Content is protected !!