ಉದಯವಾಹಿನಿ, ಬೀದರ್: ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇಂದು ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಮ ಅವರ ಜಯಂತಿ ಕಾರ್ಯಕ್ರಮ ಆಯೋಜಿಸಲಾಯಿತು
ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಅತ್ಯಂತ ಸರಳವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರು ಬಾಬು ಜಗಜೀವನ ರಾಮ ಅವರ ಭಾವಚಿತ್ರಕ್ಕೆ ಪೂಜಿ ಸಲ್ಲಿಸಿ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಣಾಧಿಕಾರಿ ಗಿರೀಶ ಬದೌಲೆ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಚೆನ್ನಬಸವಣ್ಣ ಎಸ್.ಎಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಸೇರಿದಂತೆ ಜಿಲ್ಲೆಯ ಇತರೆ ಹಿರಿಯ ಅಧಿಕಾರಿಗಳು, ಸಿಬ್ಬಂದಿಗಳು ಜಯಂತಿ ಕಾರ್ಯಕ್ರಮದಲ್ಲಿ ಹಾಜರಿದ್ದರು.
