ಉದಯವಾಹಿನಿ, ಬೆಂಗಳೂರು: ರಾಜ್ಯದಲ್ಲಿ ಪ್ರಧಾನಿ ನರೇಂದ್ರಮೋದಿ ಅವರ ಪರವಾದ ಅಲೆ ಎಲ್ಲೆಡೆ ಬೀಸುತ್ತಿದ್ದು, ಇದನ್ನು ಮತವಾಗಿ ಪರಿವರ್ತಿಸಿದರೆ 28ಕ್ಕೆ 28 ಲೋಕಸಭಾ ಕ್ಷೇತ್ರಗಳನ್ನು ನಾವು ಸುಲಭವಾಗಿ ಗೆಲ್ಲಲಿ ದ್ದೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾರತೀಯ ಜನತಾ ಪಕ್ಷದ 44ನೇ ಸ್ಥಾಪನಾ ದಿನಾಚರಣೆ ನಿಮಿತ್ತ ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ನಾವು ಸ್ವಲ್ಪ ಪರಿಶ್ರಮ ಹಾಕಿದರೆ 28 ಲೋಕಸಭಾ ಕ್ಷೇತ್ರಗಳಲ್ಲೂ ಗೆದ್ದು ದಾಖಲೆ ಬರೆಯಬಹುದು. ಇದಕ್ಕಾಗಿ ಕಾರ್ಯಕರ್ತರು ಸಜ್ಜಾಗಬೇಕೆಂದು ಕರೆ ಕೊಟ್ಟರು.ಮೋದಿಯವರ ಜನಪ್ರಿಯತೆಯನ್ನು ಮತವಾಗಿ ಪರಿವರ್ತನೆ ಮಾಡಬೇಕು. ನರೇಂದ್ರಮೋದಿಯವರಿಗೆ ಶಕ್ತಿ ತುಂಬುವ ಕೆಲಸ ಮಾಡೋಣ. ದೇಶಾದ್ಯಂತ ಕಿರುದೇಣಿಗೆ ಅಭಿಯಾನ ನಡೆಯುತ್ತಿದೆ. ಪ್ರತಿಯೊಬ್ಬ ಕಾರ್ಯಕರ್ತನೂ ನಮೋ ಆಪ್ ಮೂಲಕ ಭಾಗವಹಿಸಬೇಕು. ಎಷ್ಟಾದರೂ ಸರಿ ದೇಣಿಗೆ ನೀಡಬೇಕು ಎಂದು ಮನವಿ ಮಾಡಿದರು.

ಪ್ರಧಾನಿ ನರೇಂದ್ರಮೋದಿ ಅವರು ಬರೀ ಭಾರತಕ್ಕೆ ನಾಯಕತ್ವ ಕೊಟ್ಟವರಲ್ಲ, ವಿಶ್ವಕ್ಕೆ ನಾಯಕತ್ವ ಕೊಟ್ಟವರು. ಪ್ರಧಾನಿಯಾಗಿ ಹತ್ತು ವರ್ಷ ವಿಶ್ರಾಂತಿ ತೆಗೆದುಕೊಳ್ಳದೇ ಕೆಲಸ ಮಾಡುತ್ತಿರುವವರು ಇದ್ದಾರೆ ಅಂದರೆ ಅದು ನರೇಂದ್ರಮೋದಿ ಮಾತ್ರ ಎಂದರು.

Leave a Reply

Your email address will not be published. Required fields are marked *

error: Content is protected !!