ಉದಯವಾಹಿನಿ, ನಂಜನಗೂಡು: ಹಸಿರು ಕ್ರಾಂತಿಯ ಹರಿಕಾರ ಹಾಗೂ ಮಾಜಿ ಉಪ ಪ್ರಧಾನ ಮಂತ್ರಿ ಡಾ. ಬಾಬು ಜಗಜೀವನ ರಾo ರವರ ಆದರ್ಶಗಳು ಮತ್ತು ಸಿದ್ಧಾಂತಗಳನ್ನು ನಾವೆಲ್ಲರೂ ಪಾಲಿಸಬೇಕು ಎಂದು ತಹಸೀಲ್ದಾರ್ ಶಿವಕುಮಾರ್ ತಿಳಿಸಿದರು.
ನಗರದ ತಾಲೂಕು ಮಿನಿ ವಿಧಾನಸೌಧದಲ್ಲಿ ತಾಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸರಳವಾಗಿ ಆಯೋಜಿಸಿದ ಬಾಬು ಜಗಜೀವನ ರಾಮ್ 117 ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಮಿನಿ ವಿಧಾನಸೌಧ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ
ಬಾಬು ಜಗಜೀವನ ರಾo ರವರ ಭಾವಚಿತ್ರ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಚಾಲನೆ ನೀಡಿ ಮಾತನಾಡಿದ ತಹಸೀಲ್ದಾರ್ ಶಿವಕುಮಾರ್ ಅವರು 1908ರಲ್ಲಿ ಬಡ ಕುಟುಂಬದಲ್ಲಿ ಜನಿಸಿದ ಇವರು ಚೆನ್ನಾಗಿ ಓದಿದ ನಂತರ ಇವರಿಗೆ ಸರ್ಕಾರಿ ಉದ್ಯೋಗ ಸಿಕ್ಕಿತು ಆದರೆ ಇವರು ಉದ್ಯೋಗ ಬೇಡ ಎಂದು ಸ್ವತಂತ್ರ ಹೋರಾಟದಲ್ಲಿ ಪಾಲ್ಗೊಂಡರು ಇವರು ಸ್ವತಂತ್ರ ಹೋರಾಟದಲ್ಲಿ ಇವರ ಪಾತ್ರ ಬಹಳ ದೊಡ್ಡದಿದೆ ಎಂದರು.
ಇವರು ಮೂವತ್ತೊಂದು ವರ್ಷ ಕಾಲ ಕೇಂದ್ರ ಮಂತ್ರಿಗಳಾಗಿದ್ದ ಬಾಬು ಜಗಜೀವನ ರಾo ರವರು ಕೃಷಿ ಇಲಾಖೆ, ಕಾರ್ಮಿಕ ಇಲಾಖೆ ರೈಲ್ವೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ ದೇಶದಲ್ಲಿ ಬರ ಪರಿಸ್ಥಿತಿ ಇದ್ದಾಗ ಹಸಿರು ಕ್ರಾಂತಿಗೆ ಕಾರಣಕರ್ತರಾಗಿದ್ದಾರೆ ಇಂತಹ ಮಹತ್ವ ತತ್ವಗಳನ್ನು ನಮ್ಮೆಲ್ಲರ ಬದುಕಿನಲ್ಲಿ ಸತ್ಯವೊಂದೇ ಇರಬೇಕು ಎಂದು ಬಾಬು ಜಗಜೀವನ ರಾಮ್ ಹೇಳಿದ್ದಾರೆ ಮುಂದಿನ ಪೀಳಿಗೆಗೆ ಇವರ ಬಗ್ಗೆ ತಿಳಿಸುವ ಕೆಲಸವನ್ನು ನಾವೆಲ್ಲರೂ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ತಹಸಿಲ್ದಾರ್ ಶಿವಕುಮಾರ್ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಭೀಮರಾವ್ ವಡ್ಡರ್ ಹಲವಾರು ಸಂಘ ಸಂಸ್ಥೆಯ ಅಧ್ಯಕ್ಷರುಗಳು ಕಾರ್ಯದರ್ಶಿಗಳು ಇಲಾಖೆ ಅಧಿಕಾರಿಗಳು ಮತ್ತು ಜನಾಂಗದ ಮುಖಂಡರುಗಳು ಬಂದಿದ್ದರು.
