ಉದಯವಾಹಿನಿ, ಹೊಸಕೋಟೆ : ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರಕಾರ ಕೊಟ್ಟ ಮಾತಿನಂತೆ ಐದು ಗ್ಯಾರಂಟಿಗಳನ್ನು ಈಡೇರಿಸುವುದರ ಮೂಲಕ ಬಡವರ ಪರವಾದ ಆಡಳಿತವನ್ನು ನಡೆಸುತ್ತಿದ್ದಾರೆ. ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ತಿಳಿಸಿದರು.
ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯತಿ ಕೇಂದ್ರ ಸ್ಥಾನದಲ್ಲಿ ಮತಯಾಚನೆ ನಡೆಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಕಳೆದ ಹತ್ತು ವರ್ಷಗಳಲ್ಲಿ ದೇಶದಲ್ಲಿ ಆಡಳಿತ ನಡೆಸಿದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಜನರಿಗೆ ಕೇವಲ ಸುಳ್ಳು ಭರವಸೆಗಳನ್ನು ಕೊಟ್ಟರು. ಜಾತಿ ಧರ್ಮದ ಆಧಾರದಲ್ಲಿ ಅಭಿವೃದ್ಧಿಯನ್ನು ಮರೆತು ರಾಜಕಾರಣ ಮಾಡಿದ್ದಾರೆ. ಆದರೆ ಕಳೆದ ಹತ್ತು ತಿಂಗಳ ಹಿಂದೆ ಅದರಿಂದ ಮುಂದಿನ ದಿನಗಳಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ಬಡವರಿಗೆ ಪೂರಕವಾದ ಅಭಿವೃದ್ಧಿಗಳನ್ನು ಮಾಡಲಾಗುವುದು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನ ಕರ್ನಾಟಕ ರಾಜ್ಯದಲ್ಲಿ ಮಾದರಿಯನ್ನಾಗಿ ಮಾಡುವ ಸಮಗ್ರ ಚಿಂತನೆಯನ್ನು ಹೊಂದಿದ್ದು, ನನಗೂ ಚುನಾವಣೆಯಲ್ಲಿ ಒಂದು ಅವಕಾಶ ಕೊಡಿ ಎಂದರು.ಶಾಸಕ ಶರತ್ ಬಚ್ಚೇಗೌಡ ಮಾತನಾಡಿ, ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಐದು ನ್ಯಾಯಗಳನ್ನು ನೀಡಿದೆ. ಅದರಲ್ಲಿ ೨೫ ಪ್ರಣಾಳಿಕೆಗಳನ್ನು ಕೊಟ್ಟಿದ್ದು, ಪ್ರಮುಖವಾಗಿ ಮಹಿಳೆಯರಿಗೆ ಹಾಗೂ ಯುವತಿಯರಿಗೆ ರೈತರಿಗೆ ಸಾಕಷ್ಟು ಅನುಕೂಲಕರವಾಗಲಿದೆ. ಕಾಂಗ್ರೆಸ್ ಸರಕಾರ ನುಡಿದಂತೆ ನಡೆದ ಸರಕಾರವಾಗಿದ್ದು, ಮಹಿಳಾ ಸಬಲೀಕರಣಕ್ಕೆ ಸಾಕಷ್ಟು ಒತ್ತನ್ನು ನೀಡಿದೆ.
