ಉದಯವಾಹಿನಿ, ಬಳ್ಳಾರಿ:  ಫಲಿತಾಂಶ ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಕರ್ನಾಟಕ ರಾಜ್ಯ ಕ್ರಿಯಾಶೀಲ ಶಿಕ್ಷಕರ ವೇದಿಕೆ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ರವಿಚೇಳ್ಳಗುರ್ಕಿ ಹೇಳಿದರು. ತಾಲೂಕಿನ ಸಂಜೀವರಾಯನಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ 5ನೇ ಮತ್ತು 8ನೇ ಫಲಿತಾಂಶವನ್ನು ಪ್ರಕಟಿಸಿ ಮಾತನಾಡಿದ ಅವರು ಉತ್ತೀರ್ಣಗೊಂಡ ಮಕ್ಕಳು ಮುಂದಿನ ತರಗತಿಯಲ್ಲಿ ಇನ್ನೂ ಹೆಚ್ಚಿನ ಅಂಕಗಳನ್ನು ಪಡೆಯಬೇಕು ಎಂದು ಹೇಳಿದರು.
ಸಮುದಾಯ ದತ್ತ ಶಾಲಾ ಮಾರ್ಗದರ್ಶಕರಾದ ನಂದಕಿಶೋರ್ ಅವರು ಫಲಿತಾಂಶ ಪ್ರಕಟಿಸಿ ಮಕ್ಕಳಿಗೆ ಶುಭಕೋರಿದರು.
ಉತ್ತೀರ್ಣಗೊಂಡ ಮಕ್ಕಳು ಖುಷಿಯಿಂದ ಸಂತಸ ವ್ಯಕ್ತಪಡಿಸಿದ್ದು ವಿಶೇಷವಾಗಿ ಕಂಡುಬಂದಿತು. ಶಿಕ್ಷಕರಾದ ಬಸವರಾಜ, ಮೋದಿನ್ ಸಾಬ್, ಚನ್ನಮ್ಮ, ಸುಮತಿ, ಸುಧಾ, ವೈಶಾಲಿ, ಶ್ವೇತಾ, ಉಮ್ಮೆಹಾನಿ, ಶಶಮ್ಮ ಹಾಗೂ ವಿದ್ಯಾರ್ಥಿ ಪ್ರತಿನಿಧಿ ಮಹೇಶ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!