ಉದಯವಾಹಿನಿ, ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕವೂ ದಾವಣಗೆರೆಯಲ್ಲಿ ಟಿಕೆಟ್ ವಂಚಿತ ಜಿ.ಬಿ.ವಿನಯ್ಕುಮಾರ್ ಬಂಡಾಯವಾಗಿ ಸ್ಪರ್ಧೆ ಮಾಡುವ ಇಂಗಿತದಿಂದ ಹಿಂದೆ ಸರಿದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ದಾವಣಗೆರೆಯಲ್ಲಿ ಕುಟುಂಬ ರಾಜಕಾರಣದಿಂದ ರೊಚ್ಚಿಗೆದ್ದು ನಿಂತಿರುವ ವಿನಯ್ಕುಮಾರ್, ಈವರೆಗೂ 6 ಕ್ಷೇತ್ರಗಳಲ್ಲಿ ಸಂಚರಿಸಿ ಜನರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ದಾವಣಗೆರೆ ಉತ್ತರ ಹಾಗೂ ಮಾಯಕೊಂಡ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಜನರ ಅಭಿಪ್ರಾಯ ಪಡೆದ ಬಳಿಕ ಪಕ್ಷೇತರನಾಗಿ ಸ್ಪರ್ಧೆ ಮಾಡಬೇಕೋ ಅಥವಾ ಬೇಡವೋ ಎಂಬ ಕುರಿತು ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ನಿನ್ನೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ್ದೇವೆ. ಅದೊಂದು ಸೌಜನ್ಯಯುತವಾದ ಭೇಟಿ. ಭೇಟಿ ಮಾಡಿದಾಕ್ಷಣ ನಾನು ಬಂಡಾಯ ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ ಎಂಬ ಅಭಿಪ್ರಾಯಕ್ಕೆ ಬರಬೇಡಿ, ಮುಖ್ಯಮಂತ್ರಿಯವರ ಬಳಿಯೂ ಪಕ್ಷೇತರನಾಗಿ ನಿಂತರೆ ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎಂದು ಮನವರಿಕೆ ಮಾಡಿಕೊಟ್ಟಿದ್ದೇನೆ. ಅದಕ್ಕೆ ಅವರು ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ಸಲಹೆ ನೀಡಿದ್ದಾರೆ.

ಮುಂದಿನ ದಿನಗಳಲ್ಲಿ ನಾವು ನಿನ್ನನ್ನು ಬೆಳೆಸುತ್ತೇವೆ, ಉತ್ತಮ ಭವಿಷ್ಯವಿದೆ, ಯಾವುದೇ ನಿರ್ಧಾರ ಮಾಡಬೇಡಿ ಎಂದು ಹೇಳಿದ್ದಾರೆ. ಆದರೆ ತಾವು ಬಂಡಾಯ ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ ಎಂದು ವ್ಯಾಖ್ಯಾನ ಮಾಡುವುದು ಬೇಡ. ಇನ್ನೆರೆಡು ಕ್ಷೇತ್ರಗಳಲ್ಲಿ ಜನರ ಅಭಿಪ್ರಾಯ ಪಡೆದ ಬಳಿಕ ನನ್ನ ನಿರ್ಧಾರವನ್ನುತಿಳಿಸುತ್ತೇನೆ. ಸದ್ಯಕ್ಕೆ ನಾನಿನ್ನೂ ಪಕ್ಷೇತರರಾಗಿ ಸ್ರ್ಪಧಿಸುವ ಇರಾದೆಯಲ್ಲಿಯೇ ಇರುವುದಾಗಿ ಹೇಳಿದ್ದಾರೆ.

ಶ್ಯಾಮನೂರು ಶಿವಶಂಕರಪ್ಪ ಅವರ ಕುಟುಂಬಕ್ಕೆ ಲೋಕಸಭಾ ಚುನಾವಣೆಯ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ ವಿನಯ್ಕುಮಾರ್ ರೊಚ್ಚಿಗೆದ್ದಿದ್ದು, ಪಕ್ಷೇತರನಾಗಿ ಸ್ರ್ಪಧಿಸುವ ಪ್ರಯತ್ನ ಮಾಡುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!