ಉದಯವಾಹಿನಿ, ಮಾಲೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಏ.೧೭ರಂದು ಕೋಲಾರ ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಕೆ.ವಿ.ಗೌತಮ್ ಅವರ ಪರವಾಗಿ ಮತಯಾಚನೆ ಮಾಡಲು ಬಹಿರಂಗ ಸಭೆಗೆ ೫೦,೦೦೦ಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾಜಿ ಉಪಾಧ್ಯಕ್ಷ ಸಂಸದ ರಾಹುಲ್ ಗಾಂಧಿ ಆಗಮಿಸಿ ಬೃಹತ್ ಸಮಾವೇಶದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದರು.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಪರವಾಗಿ ಮತಯಾಚನೆ ಮಾಡುವ ಕಾಂಗ್ರೆಸ್ ಪಕ್ಷದ ಬಹಿರಂಗ ಸಭೆಯ ನಡೆಯುವ ಮಾಲೂರು ಹೊಸಕೋಟೆ ರಸ್ತೆಯ ಇರಬನಹಳ್ಳಿ ಗೇಟ್ ಬಳಿ ಇರುವ ಸ್ಥಳವನ್ನು ವೀಕ್ಷಿಸಿ ಮಾತನಾಡಿದರು.
ಕಾಂಗ್ರೆಸ್ ಪಕ್ಷಕ್ಕೆ ಇತಿಹಾಸವಿದೆ ಜಾತ್ಯತೀತ ಪಕ್ಷವಾಗಿದೆ. ಎಲ್ಲಾ ಜಾತಿ ಜನಾಂಗದವರು ಧರ್ಮದವರನ್ನು ಸಹೋದರತೆಯಿಂದ ಒಗ್ಗಟ್ಟಾಗಿ ಕರೆದೊಯ್ಯುವ ಕೆಲಸ ಮಾಡಲಾಗುತ್ತಿದೆ. ಕೇಂದ್ರದಲ್ಲಿ ೬೦ ವರ್ಷಗಳ ಕಾಲ ಆಡಳಿತವನ್ನು ನಟಿಸಿರುವ ಕಾಂಗ್ರೆಸ್ ಪಕ್ಷವು ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯವನ್ನು ದೊರಕಿಸಿ ಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದೆ. ಅಲ್ಲದೆ ದೇಶದ ಅಭಿವೃದ್ಧಿಗೆ ಹಲವಾರು ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಕಳೆದ ೧೦ ತಿಂಗಳ ಹಿಂದೆ ಆಡಳಿತಕ್ಕೆ ಬಂದ ಕಾಂಗ್ರೆಸ್ ಪಕ್ಷದ ರಾಜ್ಯ ಸರ್ಕಾರವು ನುಡಿದಂತೆ ನಡೆದಿದೆ ಚುನಾವಣಾ ಪೂರ್ವದಲ್ಲಿ ನೀಡಿದ್ದ ೫ ಗ್ಯಾರಂಟಿ ಯೋಜನೆಗಳು ಅನುಷ್ಠಾನಗೊಳಿಸಿ ಜನರ ಕಷ್ಟ ಸುಖಗಳಿಗೆ ನೆರವು ನೀಡಿದೆ ಗ್ಯಾರಂಟಿ ಯೋಜನೆಗಳ ಪಡೆಯುತ್ತಿರುವ ಫಲಾನುಭವಿಗಳು ಹಾಗೂ ಯುವಕ ಯುವತಿಯರು ದೇಶದಲ್ಲಿ ಸುಭದ್ರ ಸರ್ಕಾರ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ರಾಜ್ಯದಲ್ಲಿ ಇಪ್ಪತ್ತಕ್ಕೂ ಹೆಚ್ಚು ಸಂಸದರನ್ನು ಗೆಲ್ಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.

Leave a Reply

Your email address will not be published. Required fields are marked *

error: Content is protected !!