ಉದಯವಾಹಿನಿ, ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಕ್ಷಣಕ್ಕೊಂದು ಮಾತು, ಘಳಿಗೆಗೊಂದು ಹೇಳಿಕೆ. ಕರ್ನಾಟಕದ ಮುಖ್ಯಮಂತ್ರಿ ಕುರ್ಚಿಯ ಮೇಲೆ ನೀವು ಕೂತಿದ್ದಿರೋ ಅಥವಾ ಊಸರವಳ್ಳಿ ಏನಾದರೂ ಕೂತಿದೆಯೋ? ನನಗಂತೂ ಅನುಮಾನ ಎಂದು ಹೇಳಿದ್ದಾರೆ.
ಇಷ್ಟು ಬಣ್ಣಗೇಡಿ ವರ್ತನೆಯನ್ನು ನಿಮ್ಮಿಂದ ನಿರೀಕ್ಷೆ ಮಾಡಿರಲಿಲ್ಲ ನಾನು. ಅತೀವ ವಿಷಾದ ಮತ್ತು ನೋವಿನಿಂದಲೇ ಈ ಮಾತು ಹೇಳುತ್ತಿದ್ದೇನೆ ಸಿದ್ದರಾಮಯ್ಯನವರೇ. ಮೈಸೂರಿನಲ್ಲಿ ಇವತ್ತು ಬೆಳಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದೀರಿ. ನೊಂದ ಮಹಿಳೆಯರ ವಿಡಿಯೋಗಳನ್ನು ಜಾಲತಾಣಗಳಲ್ಲಿ ಹಂಚುವುದು, ಹರಡುವುದು ಮುಖ್ಯವಲ್ಲ. ಅದು ಅಪರಾಧವೂ ಅಲ್ಲ. ಅಶ್ಲೀಲ ವಿಡಿಯೋಗಳನ್ನು ವೈರಲ್‌ ಮಾಡಿದ್ದು ದೊಡ್ಡ ಅಪರಾಧ ಎನ್ನುವುದು ಯಾವ ಸೆಕ್ಷನ್‌ನಲ್ಲಿದೆ? ಅದನ್ನು ಯಾವ ಸೆಕ್ಷನ್‌ನಲ್ಲಿ ಉಲ್ಲೇಖಿಸಿದ್ದಾರೆ? ಕುಮಾರಸ್ವಾಮಿ ಪ್ರಕಾರ ಯಾವುದಾದರೂ ಹೊಸ ಸೆಕ್ಷನ್‌ ಇದ್ದರೆ ಹೇಳಲಿ ಎಂದು ನನಗೆ ಪ್ರಶ್ನೆ ಮಾಡಿದ್ದೀರಿ ಎಂದಿದ್ದಾರೆ. ನಿಜ, ನೀವು ಸ್ವಯಂಘೋಷಿತ ಸಂವಿಧಾನ ತಜ್ಞರು. ಪ್ರಖ್ಯಾತ ಮಾಜಿ ವಕೀಲರು. ಹಾಲಿ ಮುಖ್ಯಮಂತ್ರಿಗಳು. ಆದರೂ ನಿಮ್ಮ ಪ್ರಶ್ನೆಗೆ ಉತ್ತರ ಕೊಡುವುದು ನನ್ನ ಧರ್ಮ. ಆದರೆ, ನಿಮಗೆ ಈ ಪರಿ ಅಜ್ಞಾನವೇ ಎನ್ನುವುದು ನನಗೆ ಸೋಜಿಗ. ಮಾತೆತ್ತಿದರೆ, ‘ನಾನು ಲಾಯರ್‌ ಗಿರಿ ಮಾಡ್ತಾ ಇದ್ದೆ.

Leave a Reply

Your email address will not be published. Required fields are marked *

error: Content is protected !!