ಉದಯವಾಹಿನಿ, ಬೆಂಗಳೂರು: ಅಪ್ರಾಪ್ತರು ವಾಹನ ಚಲಾಯಿಸುವುದು ಅಪರಾಧವಾಗಿದ್ದು, ಅಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಪೋಷಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಎಚ್ಚರಿಕೆ ನೀಡಿದ್ದಾರೆ.
ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಕಾಲೇಜು ಆಡಿಟೋರಿಯಂನಲ್ಲಿ ಹಮಿಕೊಂಡಿದ್ದ ಮಾಸಿಕ ಜನ ಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, 18 ವರ್ಷಕ್ಕಿಂತ ಕೆಳಗಿನ ಬಾಲಕ, ಬಾಲಕಿಯರು ಎಷ್ಟೇ ಸಾರ್ಟ್ ಇದ್ದರೂ, ಅವರು ಮೊಬೈಲ್, ಇನ್ನಿತರ ತಂತ್ರಜ್ಞಾನ ಬಳಕೆ ಮಾಡಿದರೂ ಅವರು ಪ್ರಬುದ್ಧರಾಗಿರುವುದಿಲ್ಲ.
ಒಬ್ಬ ವ್ಯಕ್ತಿಗೆ 18 ವರ್ಷದ ನಂತರ ಡ್ರೈವಿಂಗ್ ಲೈಸೆನ್ಸ್ ಕೊಡಲು ವೈಜ್ಞಾನಿಕ ಕಾರಣಗಳಿವೆ. ಅಪ್ರಾಪ್ತರಿಗೆ ಮೆದುಳು ಹೆಚ್ಚು ಪ್ರಬುದ್ಧತೆ ಹೊಂದಿರುವುದಿಲ್ಲ. ನಮ ಮಕ್ಕಳು ಹೆಚ್ಚು ಬುದ್ಧಿವಂತರು, 10 ವರ್ಷಕ್ಕೇ ದ್ವಿಚಕ್ರ ವಾಹನ, 15 ವರ್ಷಕ್ಕೆ ಕಾರು ಚಲಾಯಿಸುತ್ತಾರೆ ಎಂದು ಪೋಷಕರು ತಮ ಮಕ್ಕಳಿಗೆ ವಾಹನದ ಕೀ ಕೊಟ್ಟರೆ ಅವರ ಕೈಗೆ ಆಯುಧ ಕೊಟ್ಟಂತಾಗುತ್ತದೆ ಎಂದರು.
