ಉದಯವಾಹಿನಿ, ಧರ್ಮಸ್ಥಳ: ಪುಣ್ಯ ಕ್ಷೇತ್ರಗಳಿಗೆ ಭೇಟಿ ಮುಂದುವರೆಸಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಇಂದು ಧರ್ಮಸ್ಥಳ ಮುಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ದೇವರ ದರ್ಶನ ಬಳಿಕ ಒಂದು ಗಂಟೆಗಳ ಕಾಲ ದೇವಸ್ಥಾನದ ಗರ್ಭಗುಡಿಯ ಮುಂಭಾಗದಲ್ಲೇ ನಿಂತು ಸೇವೆ ಸಲ್ಲಿಸಿದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟೆಯಾಗಿ ಮಾತುಕತೆ ನಡೆಸಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಸೋಮವಾರದ ವಿಶೇಷ ದಿನ ಮಂಜುನಾಥ ಸ್ವಾಮಿ ದರ್ಶನ ಮಾಡಿದ್ದೇನೆ. ಮಂಜುನಾಥ ಸ್ವಾಮಿಯ ದರ್ಶನಕ್ಕೆ ಯಾವಾಗಲೂ ಬರುತ್ತಿರುತ್ತೇನೆ.ಕಳೆದ ೪೦ ವರ್ಷಗಳಿಂದ ನಾನು ರಾಜಕಾರಣದಲ್ಲಿದ್ದೇನೆ. ೨೫ ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ರಾಜ್ಯದ ಜನತೆ ಬಗ್ಗೆ, ನ್ಯಾಯಾಲಯದ ಮೇಲೆ ನಂಬಿಕೆ ಇದೆ ಎಂದರು.
ಹಾಸನ ಚಲೋ ಕಾರ್ಯಕ್ರಮದ ಬಗ್ಗೆ ಗೊತ್ತಿಲ್ಲ. ದೇವೆಗೌಡರು ಪತ್ರ ಬರೆದಿರೋ ಬಗ್ಗೆಯೂ ಗೊತ್ತಿಲ್ಲ. ಯಾವುದರ ಬಗ್ಗೆಯೂ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

Leave a Reply

Your email address will not be published. Required fields are marked *

error: Content is protected !!