ಉದಯವಾಹಿನಿ, ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಡೆಂಟ್‌ ನೇಣು ಹಾಕಿಕೊಂಡು ಆತಹತ್ಯೆ ಮಾಡಿಕೊಂಡಿರುವ ಘಟನೆ ಕಳೆದ ರಾತ್ರಿ ಇಲ್ಲಿ ನಡೆದಿದೆ. ಬೆಂಗಳೂರಿನಲ್ಲಿರುವ ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ಲೆಕ್ಕಪತ್ರ ವಿಭಾಗದ ಅಧೀಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದ ಚಂದ್ರಶೇಖರ್‌ (52) ಆತಹತ್ಯೆ ಮಾಡಿಕೊಂಡವರು.
ವಿನೋಬನಗರದ ಕೆಂಚಪ್ಪ ಲೇಔಟ್‌ನಲ್ಲಿರುವ ಮನೆಯಲ್ಲಿ ಅವರು ಕಳೆದ ರಾತ್ರಿ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ನಿಗಮದಲ್ಲಿ ಕೇಳಿ ಬಂದಿದ್ದ ಅವ್ಯವಹಾರದಿಂದ ಮನನೊಂದಿದ್ದ ಅವರು ಡೆತ್‌ನೋಟ್‌ ಬರೆದಿಟ್ಟು ಆತಹತ್ಯೆಗೆ ಶರಣಾಗಿದ್ದಾರೆ.
ಕಳೆದ ಶುಕ್ರವಾರ ಅವರು ರಜೆ ಹಾಕಿ ತಮ ಸ್ವಂತ ಊರಾದ ಶಿವಮೊಗ್ಗಕ್ಕೆ ಬಂದಿದ್ದರು. ಎಲ್ಲರೊಂದಿಗೆ ಲವಲವಿಕೆಯಿಂದಿದ್ದ ಅವರು ನಿನ್ನೆ ಸಂಜೆ ಬೆಡ್‌ರೂಮ್‌ಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರು. ರಾತ್ರಿ ಊಟಕ್ಕೆ ಕರೆಯಲು ಪತ್ನಿ ಬಾಗಿಲು ತಟ್ಟಿದಾಗ ಬಾಗಿಲು ತೆರೆಯದಿದ್ದಾಗ ಅನುಮಾನಗೊಂಡು ಮನೆಯವರು ಬಾಗಿಲು ಒಡೆದು ನೋಡಿದಾಗ ನೇಣು ಹಾಕಿಕೊಂಡಿರುವುದು ಗೊತ್ತಾಗಿದೆ.

 

Leave a Reply

Your email address will not be published. Required fields are marked *

error: Content is protected !!