ಉದಯವಾಹಿನಿ, ಕುಣಿಗಲ್: ತಾಲ್ಲೂಕಿನ ಹುಲಿಯೂರುದುರ್ಗದಲ್ಲಿ ಮಂಗಳವಾರ ವ್ಯಕ್ತಿಯೊಬ್ಬರು ತನ್ನ ಪತ್ನಿಯ ಕತ್ತು ಕತ್ತರಿಸಿ, ಚರ್ಮ ಸುಲಿದು ವಿಕೃತಿ ಮೆರೆದಿದ್ದಾರೆ.
ಪುಷ್ಪಾ (35) ಕೊಲೆಯಾದವರು, ಶಿವರಾಮ ಕೊಲೆ ಮಾಡಿದ ಆರೋಪಿ. ಇವರಿಗೆ ನಾಲ್ಕು ವರ್ಷದ ಗಂಡು ಮಗು ಇದೆ.
ಸೋಮವಾರ ಸಂಜೆಯಿಂದಲೇ ಇಬ್ಬರ ಮಧ್ಯೆ ಜಗಳವಾಗುತ್ತಿತ್ತು.
ಮಂಗಳವಾರ ಬೆಳಗ್ಗೆ ಮನೆ ಬಾಗಿಲಲ್ಲಿ ರಕ್ತದ ಕಲೆಗಳನ್ನು ಕಂಡ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ನೋಡಿದಾಗ ಹತ್ಯೆಯಾಗಿರುವುದು ಗೊತ್ತಾಗಿದೆ. ಶಿವರಾಮರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೊಲೆಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

error: Content is protected !!