ಉದಯವಾಹಿನಿ, ಮಂಡ್ಯ: ನಾಗಮಂಗಲ ತಾಲ್ಲೂಕು ಬೆಳ್ಳೂರು ಪಟ್ಟಣದಲ್ಲಿ ಸೋಮವಾರ ರಾತ್ರಿ 2 ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.ಮುಸ್ಲಿಂ ಯುವಕರ ಗುಂಪೊಂದು ಬೆಳ್ಳೂರಿನ ಯುವಕ ಅಭಿಲಾಷ್ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಖಂಡಿಸಿ ನೂರಾರು ಜನರು ಸೋಮವಾರ ರಾತ್ರಿಯೇ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಪಟ್ಟುಹಿಡಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಯಿತು.
ಘಟನೆಯ ವಿವರ: ಮೇ 25ರಂದು ಅಭಿಷೇಕ್ ಬೈಕ್‌ನಲ್ಲಿ ತೆರಳುತ್ತಿದ್ದಾಗ ಯುವಕರ ಗುಂಪು ವೇಗವಾಗಿ ಬೈಕ್‌ನಲ್ಲಿ ಬಂದಿದೆ. ಅಭಿಲಾಷ್ ಬೈಕ್‌ಗೆ ಸ್ಪರ್ಶಿಸಿ ಮುಂದೆ ತೆರಳಿದ್ದಾರೆ. ಇದನ್ನು ಪ್ರಶ್ನಿಸಿದ ಕಾರಣಕ್ಕೆ ಅವರು ಅಭಿಲಾಷ್ ಮೇಲೆ ಹಲ್ಲೆ ನಡೆಸಿದ್ದಾರೆ. ಜೊತೆಗೆ ಗುಂಪು ಕಟ್ಟಿಕೊಂಡು ಮನೆಗೆ ನುಗ್ಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಮುಸ್ಲಿಂ ಯುವಕರು ಕೂಡ ಅಭಿಲಾಷ್ ಹಾಗೂ ಇತರರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪ್ರತಿ ದೂರು ನೀಡಿದ್ದಾರೆ.
ಘ
