ಉದಯವಾಹಿನಿ, ಕೋಲಾರ: ಸದನದಲ್ಲಿ ಶಿಕ್ಷಕರ ಸಮಸ್ಯೆಗಳಿಗೆ ಧ್ವನಿಯಾಗಿ ಪ್ರಶ್ನೆ ಮಾಡಲು ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್ ಅವರಿಗೆ ಶಿಕ್ಷಕರು ಪ್ರಥಮ ಪ್ರಾಶಸ್ತದ ಮತ ನೀಡಿ ಗೆಲ್ಲಿಸುವಂತೆ ಶಾಸಕ ಕೊತ್ತೂರು ಜಿ. ಮಂಜುನಾಥ್ ಮನವಿ ಮಾಡಿದರು.ಅಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಸೋಮವಾರ ನಗರದಲ್ಲಿ ವಿವಿಧ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಮತಯಾಚನೆಯಲ್ಲಿ ಮಾತನಾಡಿದ ಅವರು ಸುಮಾರು ೧೮ ವರ್ಷಗಳಿಂದ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿ ಸರಕಾರದಲ್ಲಿ ಪ್ರಭಾವಿಯಾಗಿದ್ದರೂ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವಿದ್ದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆದ್ದಾಗ ಸಮಸ್ಯೆಗಳಿಗೆ ಸ್ಪಂದನೆ ಸಿಗುತ್ತದೆ ಕಾಂಗ್ರೆಸ್ ಅಭ್ಯರ್ಥಿ ಸ್ವತಃ ಶಿಕ್ಷಣ ಸಂಸ್ಥೆಗಳನ್ನು ಹೊಂದಿದ್ದು ಶೈಕ್ಷಣಿಕ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಅರಿವು ಇದ್ದು ಆಯ್ಕೆಯಾದರೆ ನಮ್ಮೊಂದಿಗೆ ಜೊತೆಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಅಧ್ಯತೆಯನ್ನು ನೀಡಿದ್ದಾರೆ ಕಾಂಗ್ರೆಸ್‌ಅಭ್ಯರ್ಥಿ ಆಯ್ಕೆಯಾದರೆ ಶಿಕ್ಷಕರ ನಿರೀಕ್ಷೆ ಹುಸಿಯಾಗದಂತೆ ರಾಜ್ಯದಲ್ಲಿ ನಿಮ್ಮಗಳ ಧ್ವನಿಯಾಗಿ ಕೆಲಸ ಮಾಡಲಿದ್ದಾರೆ ಕಾಂಗ್ರೆಸ್‌ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಬದಲಾವಣೆಗಳಾಗಿವೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣದ ಪಠ್ಯಕ್ರಮದಲ್ಲಿ ಅನೇಕ ಬದಲಾವಣೆಯನ್ನು ತರಲಾಗಿದೆ ವಿದ್ಯಾಸಿರಿ ಯೋಜನೆ ಜಾರಿಗೆ ತಂದು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿದ್ದಾರೆ. ೫ ಗ್ಯಾರಂಟಿ ಯೋಜನೆಗಳನ್ನು ಎಲ್ಲ ಜನರಿಗೂ ತಲುಪಿಸಲು ಕ್ರಮವಹಿಸಲಾಗಿದೆ. ಮಹಿಳಾ ಶಿಕ್ಷಕಿಯರಿಗೂ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದರು.
