ಉದಯವಾಹಿನಿ,ಶಿವಮೊಗ್ಗ: ಬೈಕ್ ಸ್ಕಿಡ್ ಆಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲಿಯೇ ನರಳಾಡುತ್ತಿದ್ದ ದಂಪತಿಯನ್ನು ಶಾಸಕ ಬೇಳೂರು ಗೋಪಾಲಕೃಷ್ಣ ತಮ್ಮದೇ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರ-ಆನಂದಪುರ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಶಾಸಕರು ಇದೇ ಮಾರ್ಗದಲ್ಲಿ ತೆರಳುತ್ತಿದ್ದರು. ಅಪಘಾತದಲ್ಲಿ ರಕ್ತದ ಮಡುವಲ್ಲಿ ಬಿದ್ದಿದ್ದ ದಂಪತಿಯನ್ನು ಕಂಡು ತಕ್ಷಣ ವಾಹನ ನಿಲ್ಲಿಸಿ ತಮ್ಮದೇ ಬೆಂಗಾವಲು ಪಡೆ ವಾಹನದಲ್ಲಿ ಗಾಯಾಳು ದಂಪತಿಯನ್ನು ಸಾಗರ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದಾರೆ. ಸಿಗಂದೂರು ದೇವಸ್ಥಾನಕ್ಕೆ ತೆರಳಿ ದಂಪತಿ ವಾಪಾಸ್ ಆಗುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ. ಶಾಸಕರ ಮಾನವೀಯತೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
