ಉದಯವಾಹಿನಿ, ನಂಜನಗೂಡು: ಕುರಿ ಮೇಕೆಗಳನ್ನು ಹೊತ್ತೊಯ್ಯುತ್ತಿದ್ದ ಚಿರತೆ ಸೆರೆಯಾಗಿದೆ.ನಂಜನಗೂಡು ತಾಲೂಕಿನ ರಾಂಪುರ ಗ್ರಾಮದ ರೈತ ಗಣೇಶ ನಾಯಕ ಎಂಬುವರ ಜಮೀನಿನಲ್ಲಿ ಇರಿಸಲಾಗಿದ್ದ ಬೋನಿಗೆ ಬಿದ್ದಿದೆ.
ರಾತ್ರೋ ರಾತ್ರಿ ಸಾಕು ಪ್ರಾಣಿಗಳನ್ನ ಬಲಿ ಪಡೆದು ಆತಂಕ ಸೃಷ್ಟಿಸಿದ್ದ ಚಿರತೆ ಸೆರೆ ಹಿಡಿದ ಅರಣ್ಯಾಧಿಕಾರಿಗಳಾದ ನಿತಿನ್ ಮತ್ತು ಸಿಬ್ಬಂದಿಗಳು ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.ಚಿರತೆ ಸೆರೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
