ಉದಯವಾಹಿನಿ, ಚಾಮರಾಜನಗರ : ರಾಜ್ಯದ ಪ್ರಸಿದ್ದ ದೇವಾಲಯದಲ್ಲಿ ಪೂಜೆ ವಿಚಾರಕ್ಕೆ ಗಲಾಟೆ ನಡೆದಿದ್ದು, ಅರ್ಚಕರು ತ್ರಿಶೂಲದಲ್ಲಿ ಹೊಡೆದಾಡಿಕೊಂಡಿದ್ದಾರೆ. ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಮೂರು ಸಿದ್ದಪ್ಪಾಜಿ ದೇವಸ್ಥಾನದಲ್ಲಿ ಈ ಗಲಾಟೆ ನಡೆದಿದೆ.
ಘಟನೆಯಲ್ಲಿ ಮೂವರು ಅರ್ಚಕರಿಗೆ ಗಂಭೀರ ಗಾಯವಾಗಿದೆ. ಚಿಕ್ಕಲೀರಿ ದೇವಾಲಯದ ಅರ್ಚಕ ಶಂಕರಪ್ಪ (65) ಶಿವಕುಮಾರಸ್ವಾಮಿ (40) ಹಾಗೂ ನಂಜುಂಡಸ್ವಾಮಿ (32) ಗಂಭೀರವಾಗಿ ಗಾಯಗೊಂಡಿದ್ದಾರೆ.
ಪೂಜೆ ವಿಚಾರಕ್ಕೆ ಅರ್ಚಕರ ನಡುವೆ ಗಲಾಟೆ ನಡೆದಿದ್ದು, ಬೆತ್ತ ಹಾಗೂ ತ್ರಿಶೂಲಗಳನ್ನು ಹಿಡಿದುಕೊಂಡು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಕೊಳ್ಳೆಗಾಲದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!