ಉದಯವಾಹಿನಿ, ಬೆಂಗಳೂರು: ಕರ್ನಾಟಕದ ಜನತೆಯಲ್ಲಿ ಮೂಡಿರುವ ಅನುಮಾನ ನಿವಾರಿಸಲು ರಾಜ್ಯದ ಎಲ್ಲಾ ನಿಗಮ ಮಂಡಳಿಗಳ ಹಣಕಾಸಿನ ಸ್ಥಿತಿಗತಿ ಬಗ್ಗೆ ಒಂದು ಸಂಪೂರ್ಣ ಆಡಿಟ್‌ ನಡೆಸಿ, ನಿಗಮ ಮಂಡಳಿಗಳ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಒತ್ತಾಯಿಸಿದ್ದಾರೆ.
ಈ ಕುರಿತು ತಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಅವರು, ಕರ್ನಾಟಕವನ್ನು ಲೂಟಿ ಮಾಡಿ ಕಾಂಗ್ರೆಸ್‌‍ ಹೈಕಮಾಂಡ್‌ ಗೆ ಟಕಾಟಕ್‌ ಅಂತ ಹಣ ವರ್ಗಾವಣೆ ಮಾಡುತ್ತಿರುವ ಕಾಂಗ್ರೆಸ್‌‍ ಸರ್ಕಾರಕ್ಕೆ ರಾಜ್ಯದ ನಿಗಮ ಮಂಡಳಿಗಳೇ ಎಟಿಎಂಗಳಾಗಿವೆ ಎಂದು ವಾಗ್ದಾಳಿ ನಡೆಸಿದ್ದಾರೆ.
ದಲಿತರು, ಹಿಂದುಳಿದವರು, ಬಡವರು, ರೈತರು, ಗ್ರಾಮೀಣ ಪ್ರದೇಶಗಳ ಜನರ ಕಲ್ಯಾಣಕ್ಕೆ ವಿನಿಯೋಗವಾಗಬೇಕಿದ್ದ ನಿಗಮ ಮಂಡಳಿಗಳ ಹಣ ಭ್ರಷ್ಟರ ಪಾಲಾಗುತ್ತಿರುವ ವಾಸನೆ ಬರುತ್ತಿದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬ್ರಹಾಂಡ ಭ್ರಷ್ಟಾಚಾರ ಗಮನಿಸಿದರೆ ರಾಜ್ಯದಲ್ಲಿರುವ ಎಲ್ಲಾ ನಿಗಮ ಮಂಡಳಿಗಳನ್ನು ಭ್ರಷ್ಟಾಚಾರಕ್ಕೆ ಬಳಸಿಕೊಂಡಿರುವ ದಟ್ಟವಾದ ಶಂಕೆ ಮೂಡುತ್ತಿದೆ ಎಂದು ಅನುಮಾನ ಹೊರಹಾಕಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!