ಉದಯವಾಹಿನಿ, ಮಾಲೂರು : ಪ್ರಸ್ತುತ ಮಳೆಗಾಲವಾಗಿದ್ದು ನೀರಿನ ಸಂಗ್ರಹಗಳಲ್ಲಿ ಸೊಳ್ಳೆಗಳ ಉತ್ಪತ್ತಿ ಅಧಿಕವಾಗಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ನಾಗರಿಕರು ಮನೆಯ ಸುತ್ತಮುತ್ತಲಿನ ಪರಿಸರದಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸುವುದರಿಂದ ಮಲೇರಿಯಾ ಡೆಂಗಿ ಚಿಕನ್ ಗುನ್ಯಾ ಹರಡುವುದನ್ನು ತಡೆಗಟ್ಟಬಹುದು, ಈ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಸ್ವಚ್ಛತೆ ಹಾಗೂ ಶುದ್ಧ ಕುಡಿಯುವ ನೀರಿನ ಸರಬರಾಜಿಗೆ ಆದ್ಯತೆ ನೀಡುವಂತೆ ಜಿಲ್ಲಾ ಆರೋಗ್ಯ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ರವಿಕುಮಾರ್ ಹೇಳಿದರು.
ಪಟ್ಟಣದ ತಾಲೂಕು ಪಂಚಾಯಿತಿಯ ಸಾಮರ್ಥ್ಯಸೌಧ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ಡೆಂಗಿ ದಿನ ಅಂಗವಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡಿದರು.
ಡೆಂಗಿ ಜ್ವರ ಇದೊಂದು ಸಾಂಕ್ರಾಮಿಕ ರೋಗವಾಗಿದ್ದು ಈ ರೋಗವನ್ನು ತಡೆಗಟ್ಟಲು ನಮ್ಮ ಪರಿಸರದ ಸ್ವಚ್ಛತೆ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು ಜಿಲ್ಲೆಯಲ್ಲಿ ೨೮ ಪ್ರಕರಣಗಳು ಕಂಡುಬಂದಿದ್ದು ಆದರೆ ಸಾವಿನ ಸಂಖ್ಯೆ ಯಾವುದೇ ಪ್ರಕರಣ ಕಂಡುಬಂದಿಲ್ಲ ಮುಂಗಾರು ಮಳೆ ಆರಂಭವಾಗಿರುವುದರಿಂದ ಡೆಂಗಿ ಜ್ವರದ ಪ್ರಕರಣಗಳು ಕಾಣಿಸಿಕೊಳ್ಳುತ್ತದೆ ಆದ್ದರಿಂದ ಗ್ರಾಮಗಳಲ್ಲಿ ಸುತ್ತಮುತ್ತಲ ಪರಿಸರದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಪ್ರಸ್ತುತ ಮಳೆಗಾಲವಾಗಿದ್ದು, ನೀರಿನ ಸಂಗ್ರಹಗಳಲ್ಲಿ ಸೊಳ್ಳೆಗಳ ಉತ್ಪತ್ತಿ ಅಧಿಕವಾಗುವ ಹಿನ್ನೆಲೆಯಲ್ಲಿ, ಮನೆಯ ಸುತ್ತ ಮುತ್ತಲಿನ ಪರಿಸರದಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸುವುದರಿಂದ ಮಲೇರಿಯಾ, ಡೆಂಗ್ಯೂ/ ಚಿಕೂನ್‌ಗುನ್ಯ ಹರಡುವುದನ್ನು ತಡೆಗಟ್ಟಬಹುದು. ಡೆಂಗೀ ನಿಯಂತ್ರಣದಲ್ಲಿ ಸಮುದಾಯದ ಸಕ್ರಿಯ ಭಾಗವಹಿಸುವಿಕೆ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಗತ್ಯ ಸಹಕಾರವನ್ನು ಪಡೆಯುವುದು, ಯಾವುದೇ ಜ್ವರವಿದ್ದರೂ ನಿರ್ಲಕ್ಷಮಾಡದೇ, ತಕ್ಷಣ ಸರ್ಕಾರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಡೆಂಗೀ ಜ್ವರದಿಂದ ಉಂಟಾಗುವ ಸಾವು ನೋವುಗಳನ್ನು ತಡೆಗಟ್ಟಬಹುದು ರೋಗ ಲಕ್ಷಣಗಳು ಡೆಂಗ್ಯೂ ಜ್ವರ ತೀವ್ರಜ್ವರ, ತಲೆನೋವು, ಮಾಂಸಖಂಡ, ಕೀಲುಗಳಲ್ಲಿ ನೋವು, ಕಣ್ಣುಗಳ ಹಿಂಭಾಗದಲ್ಲಿ ನೋವು, ಒಸಡು, ಮೂಗಿನಿಂದ ರಕ್ತಸ್ರಾವ ಚಿಕೂನ್‌ಗುನ್ಯ ಇದ್ದಕ್ಕಿದ್ದಂತೆ ಜ್ವರ, ಕೀಲುಗಳಲ್ಲಿ ತೀವ್ರವಾದ ನೋವು ಮತ್ತು ಊತ ಕಂಡು ಬರುತ್ತದೆ.
ಡೆಂಗ್ಯೂ ಜ್ವರದ ಸ್ವರೂಪ ಸೋಂಕಿತ ಈಡೀಸ್ ಈಜಿಫ್ಟೈ ಸೊಳ್ಳೆ ಕಡಿತದಿಂದ ಹರಡುವ ಡೆಂಗೀ ಜ್ವರವು ವೈರಾಣುಗಳಿಂದ ಉಂಟಾಗುತ್ತದೆ. ಡೆಂಗೀ ಜ್ವರದ ಲಕ್ಷಣಗಳು- ಇದ್ದಕ್ಕಿದ್ದಂತೆ ತೀವ್ರ ಜ್ವರ, ವಿಪರೀತ- ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು.

Leave a Reply

Your email address will not be published. Required fields are marked *

error: Content is protected !!