ಉದಯವಾಹಿನಿ, ಬೆಂಗಳೂರು : ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾ.ಮಂಜುನಾಥ್ ಜನರ ಮನ ಗೆದ್ದಿದ್ದು, ಡಿಕೆ ಸುರೇಶ್ ವಿರುದ್ಧ ಡಾ.ಮಂಜುನಾಥ್ ಭರ್ಜರಿ ಗೆಲುವು ದಾಖಲಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಡಿಕೆ ಬ್ರದರ್ಸ್ ಭದ್ರಕೋಟೆ. ಅಂತಹ ಭದ್ರಕೋಟೆಯನ್ನು ಡಾ.ಮಂಜುನಾಥ್ ಪುಡಿ ಮಾಡಿದ್ದಾರೆ.
ಕಳೆದ ವಿಧಾನಸಭೆ ಎಲೆಕ್ಷನ್ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಈ ಕ್ಷೇತ್ರದಲ್ಲಿ ಪ್ರಚಾರ ನಡಿಸದೇ ದಾಖಲೆಯ ಅಂತರದ ಗೆಲುವು ದಾಖಲಿಸಿದ್ದರು. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಜನ ಡಾಕ್ಟರ್ ಕೈ ಹಿಡಿದು ಅವರನ್ನು ಗೆಲ್ಲಿಸಿ ಕೊಟ್ಟಿದ್ದಾರೆ. ವೈದ್ಯರಿಗೆ ಇದೆಲ್ಲಾ ಬೇಕಾ..? ಅವರು ಚುನಾವಣಾ ಕಣದಿಂದ ಹಿಂದೆ ಸರಿಯುವುದು ಒಳ್ಳೆಯದು ಎಂಬ ಮಾತುಗಳು ಕೇಳಿಬಂದಿತ್ತು, ಆದರೆ ಡಾ.ಮಂಜುನಾಥ್ ಇದ್ಯಾವುದನ್ನೂ ಲೆಕ್ಕಿಸದೇ ಸ್ಪರ್ಧಿಸಿ ಗೆದ್ದು ಬೀಗಿದ್ದಾರೆ. ಈ ಮೂಲಕ ಡಿಕೆ ಬ್ರದರ್ಸ್ ಗೆ ಸೋಲಿನ ಆಘಾತ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!