ಉದಯವಾಹಿನಿ, ಧಾರವಾಡ : ಧಾರವಾಡ ಕ್ಷೇತ್ರದಲ್ಲಿ ಸತತ ಐದನೇ ಬಾರಿಗೆ ಗೆದ್ದು ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ದಾಖಲೆ ಬರೆದಿದ್ದಾರೆ.
ಇದುವರೆಗೆ ನಾಲ್ಕು ಬಾರಿ ಮಾತ್ರ ಸತತವಾಗಿ ಗೆದ್ದಿದ್ದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಈಗ ಹೊಸ ದಾಖಲೆ ಬರೆದಿದ್ದಾರೆ. 80 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ವಿರುದ್ಧ ಜಯಭೇರಿ ಭಾರಿಸಿದ್ದಾರೆ.ಹಾಗೆ, ಬೀದರ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆಗೆ ಭರ್ಜರಿ ಗೆಲುವು ಸಿಕ್ಕಿದೆ. 1 ಲಕ್ಷ 25 ಸಾವಿರ ಅಧಿಕ ಮತಗಳಿಂದ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಸಾಗರ್ ಖಂಡ್ರೆ ಗೆದ್ದು ಬೀಗಿದ್ದಾರೆ. ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್ ವಿರುದ್ಧ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಗೆಲುವು ಸಾಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!