ಉದಯವಾಹಿನಿ, ಕಲಬುರಗಿ: 18ನೇ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಇಂದು (ಜೂನ್ 04) ಪ್ರಕಟಗೊಂಡಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇನ್ನೂ ಕಲಬುರಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಬಿಜೆಪಿಯ ಡಾ.
ಉಮೇಶ್ ಜಾಧವ್ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ 2019 ಚುನಾವಣೆ ಸೋಲಿನ ಸೇಡನ್ನು ತೀರಿಸಿಕೊಂಡಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿರುವ ವಿಚಾರ ಕೇಳಿ ಬಿಜೆಪಿ ನಗರ ಶಕ್ತಿಕೇಂದ್ರದ ಅಧ್ಯಕ್ಷ ಮೂರ್ಛೆ ಹೋಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುಗರಿ ವಿಶ್ವವಿದ್ಯಾಲಯದ ಆವರಣದಲ್ಲಿ ಈ ಘಟನೆ ನಡೆದಿದ್ದು ಅಸ್ವಸ್ಥರನ್ನು ವೀರಣ್ಣ ಯಾರಿ ಎಂದು ಗುರುತಿಸಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
