ಉದಯವಾಹಿನಿ, ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿರುವ ಪ್ರಜ್ವಲ್‌ ರೇವಣ್ಣ ಅವರು ತನ್ನನ್ನು ಮಹಿಳಾ ಅಧಿಕಾರಿಗಳ ಮೂಲಕ ವಿಚಾರಣೆ ನಡೆಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಡಿಸಿದ್ದಾರೆಂದು ತಿಳಿದು ಬಂದಿದೆ.
ಮೇ 30ರಂದು ರಾತ್ರಿ ವಿಮಾನ ನಿಲ್ದಾಣದಿಂದ ಬಂಧಿಸಿ ದಲ್ಲಿಂದ ಹಿಡಿದು ಇದುವರೆಗೂ ಅವರನ್ನು ಮಹಿಳಾ ಅಧಿಕಾರಿಗಳೇ ವಿಚಾರಣೆ ನಡೆಸುತ್ತಿದ್ದಾರೆ.
ಆದರೆ ಪ್ರಜ್ವಲ್‌ ಯಾವ ಪ್ರಶ್ನೆಗಳಿಗೂ ಸರಿಯಾಗಿ ಉತ್ತರಿಸುತ್ತಿಲ್ಲ ಎನ್ನಲಾಗಿದೆ. ಈ ಮಧ್ಯೆ ನಾಲ್ಕು ದಿನಗಳಿಂದ ಮಹಿಳಾ ಅಧಿಕಾರಿಗಳೇ ವಿಚಾರಣೆ ನಡೆಸುತ್ತಿರುವುದಕ್ಕೆ ಆರೋಪಿ ಆಕ್ಷೇಪ ವ್ಯಕ್ತಪಡಿಸಿದ್ದು, ಪುರುಷ ಅಧಿಕಾರಿಗಳು ಯಾರು ಇಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ವೈರಲ್‌ ಆಗಿರುವ ವೀಡಿಯೋದಲ್ಲಿರುವ ಸಂತ್ರಸ್ತೆಯರನ್ನು ತೋರಿಸಿ, ಈಕೆ ಯಾರು? ಜತೆಗೆ ಈಕೆ ಹೇಗೆ ಪರಿಚಯವಾಯಿತು? ಆಕೆ ಜತೆ ಯಾವ ಸ್ಥಳದಲ್ಲಿ ಲೈಂಗಿಕ ಕ್ರಿಯೆ ನಡೆಸಲಾಗಿದೆ? ಏನು ಆಮಿಷವೊಡ್ಡಿದ್ದೆ ಮುಂತಾದ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಆದರೆ ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಲು ನಿರಾಕರಿಸಿರುವ ಆರೋಪಿ, ನೀವು ಮಹಿಳೆಯರಾಗಿ ಇಂತಹ ಪ್ರಶ್ನೆಗಳನ್ನು ಹೇಗೆ ಕೇಳುತ್ತಿರಾ ಎಂದು ಅಧಿಕಾರಿಗಳನ್ನೇ ಪ್ರಶ್ನಿಸಿದ್ದಾನೆ. ನೀವು ತೋರಿಸುತ್ತಿರುವ ಫೋಟೋಗಳಲ್ಲಿರುವ ಮಹಿಳೆಯರು ಯಾರೆಂದೇ ಗೊತ್ತಿಲ್ಲ ಎಂದು ಹೇಳಿಕೆ ನೀಡುತ್ತಿದ್ದಾನೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!