ಉದಯವಾಹಿನಿ, ಕೋಲಾರ: ಹಾಲಿ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಮೊದಲ ಗೆಲುವು ಲಭಿಸಿದ್ದು, ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಭರ್ಜರಿ ಜಯ ದಾಖಲಿಸಿದ್ದಾರೆ.ಕೋಲಾರ ಲೋಕ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್​ ಪಕ್ಷದ ಅಭ್ಯರ್ಥಿ ಮಲ್ಲೇಶ್​ ಬಾಬು ಗೆಲುವು ಸಾಧಿಸಿದ್ದಾರೆ.
ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್​ ಪಕ್ಷದ ಗೌತಮ್​ ವಿರುದ್ಧ 40 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಇದು ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್​ ಮೈತ್ರಿ ಅಭ್ಯರ್ಥಿಯ ಮೊದಲ ಗೆಲುವಾಗಿದ್ದು, ಮೀಸಲು ಕ್ಷೇತ್ರವಾಗಿದ್ದ ಕೊಲಾರದಲ್ಲಿ ತೀವ್ರ ಏರ್ಪಟ್ಟಿತ್ತು. ನಾಯಕರ ನಡುವಿನ ಜಿದ್ದಿನ ಬಳಿಕ ಈ ಫಲಿತಾಂಶ ಪ್ರಕಟಗೊಂಡಿದೆ. ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್​ ಬಾಬು ಗೆಲುವು ಸಾಧಿಸಿದ್ದಾರೆ.
2024 ರ ಲೋಕಸಭಾ ಚುನಾವಣೆಯ 2 ನೇ ಹಂತದಲ್ಲಿ ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26, 2024 ರಂದು ಮತದಾನ ನಡೆದಿತ್ತು.
2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಎಸ್ .ಮುನಿಸ್ವಾಮಿ ಅವರು ಕಾಂಗ್ರೆಸ್​​ನ ಕೆ.ಎಚ್.ಮುನಿಯಪ್ಪ ಅವರನ್ನು 2,10,021 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.56.32ರಷ್ಟು ಮತಗಳನ್ನು ಪಡೆದಿತ್ತು.

Leave a Reply

Your email address will not be published. Required fields are marked *

error: Content is protected !!