ಉದಯವಾಹಿನಿ, ಹಾಸನ : ಸಿಡಿಲು ಬಡಿದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಹಾಸನ ಜಿಲ್ಲೆ ಅರಕಲಗೂಡಿನ ದೊಡ್ಡಮಗ್ಗೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮುತ್ತಮ (70) ಪುಟ್ಟಮ್ಮ (60) ಎಂದು ಗುರುತಿಸಲಾಗಿದೆ. ಹೊಲದಲ್ಲಿ ಜೋಳ ಬಿತ್ತನೆ ಮಾಡುತ್ತಿದ್ದ ಕುಟುಂಬ ಆಶ್ರಯ ಪಡೆಯಲು ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದಿದೆ.
ಈ ದುರ್ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

error: Content is protected !!