ಉದಯವಾಹಿನಿ,ರಾಯಚೂರು: ಇಲ್ಲಿಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 20 ವಿದ್ಯಾರ್ಥಿನಿಯರು ಪಾನಿಪುರಿ ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ವಿಶ್ವವಿದ್ಯಾಲಯದ ಮುಂಭಾಗದ ರಸ್ತೆ ಬದಿಯಲ್ಲಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯಿಂದ 20 ವಿದ್ಯಾರ್ಥಿನಿಯರು ಪಾನಿಪುರಿ, ಕೆಲವರು ಆಮ್ಲೇಟ್‌ ಸೇವಿಸಿದ್ದರು.ರಾತ್ರಿ ವಾಂತಿ-ಬೇಧಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದು, ತಕ್ಷಣ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. 18 ವಿದ್ಯಾರ್ಥಿಗಳು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರ ವಿದ್ಯಾರ್ಥಿಗಳ ಆರೋಗ್ಯವೂ ಸುಧಾರಿಸಿದೆ.

‘ಪಾನಿಪುರಿ, ಆಮ್ಲೇಟ್‌ ಸೇವಿಸಿದ ಕೆಲ ವಿದ್ಯಾರ್ಥಿಗಳ ಹೊಟ್ಟೆ ತೊಳೆಸಿದಂತಾಗಿದೆ. ಎಲ್ಲರೂ ಚಿಕಿತ್ಸೆ ಪಡೆದುಕೊಂಡಿದ್ದು, ಆರೋಗ್ಯವಾಗಿದ್ದಾರೆ’ ಎಂದು ವಿಶ್ವವಿದ್ಯಾಲಯದ ಕುಲಪತಿ ವೀರನಗೌಡ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!