ಉದಯವಾಹಿನಿ, ವಿಜಯನಗರ:  ಶಾಲೆಗೆ ಹೋಗಿದ್ದ ವಿದ್ಯಾರ್ಥಿನಿ ವಿದ್ಯುತ್ ಕಂಬ ಸ್ಪರ್ಶಿಸಿ ಸಾವನ್ನಪ್ಪಿರುವ ದಾರುಣ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಕಾತ್ರಿಕಾಯನಹಟ್ಟಿಯಲ್ಲಿ ನಡೆದಿದೆ.
ಮೃತ ಬಾಲಕಿ ಕಾತ್ರಿಕಾಯನಹಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದಳು.
ಎಂದಿನಂತೆ ಇಂದು ಬೆಳಿಗ್ಗೆ ಶಾಲೆಗೆ ಹೋಗಿದ್ದಾಳೆ. ಮಳೆಯಿಂದಾಗಿ ವಿದ್ಯುತ್ ಕಂಬದಲ್ಲಿ ವಿದ್ಯುತ್ ಪ್ರವಹಿಸಿದೆ. ಬಾಲಕಿ ಗೊತ್ತಾಗದೇ ವಿದ್ಯುತ್ ಕಂಬ ಸ್ಪರ್ಶಿಸುತ್ತಿದಂತೆ ಕರೆಂಟ್ ಶಾಕ್ ಹೊಡೆದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನಾ ಸ್ಥಳಕ್ಕೆ ಕಾನಾಹೊಸಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ಬಿರುಗಾಳಿ, ಮಳೆಗೆ ಹಲವೆಡೆ ವಿದ್ಯುತ್ ಕಂಬಗಳು, ತಂತಿಗಳು ಬಿದ್ದು ಹೋಗಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ಮೆರೆದಿದ್ದಾರೆ. ಗ್ರಾಮಸ್ಥರು ಜೀವಭಯದಲ್ಲಿ ಓಡಾಡಬೇಕಾದ ಸ್ಥಿತಿ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!