ಉದಯವಾಹಿನಿ, ಮಂಗಳೂರು: ಖಾಸಗಿ ಬಸ್ ನಲ್ಲಿ ಯುವಕನೊಬ್ಬ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಕಾಮುಕನನ್ನು ಹಿಡಿದ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಿನ ಬಲ್ಲಾಳ್ ಬಾಗ್ ಎಂಬಲ್ಲಿ ನಡೆದಿದೆ.
ಯುವತಿ ನಾಗನೂರಿನಿಂದ ಬಸ್ ಹತ್ತಿ ಸ್ಟೇಟ್ ಬ್ಯಾಂಕ್ ಬಳಿ ಇಳಿದು ಬಳಿಕ ಮರೋಳಿ ಎಂಬ ಹೆಸರಿನ ಬಸ್ ನಲ್ಲಿ ಬಜಪೆ ಕಡೆ ತೆರಳುತ್ತಿದ್ದಳು.
ಯುವತಿಯನ್ನು ಹಿಂಬಾಲಿಸಿಕೊಂಡು ಬಂದಿದ್ದ ಯುವಕ, ಯುವತಿ ಕುಳಿತಿದ್ದ ಹಿಂಬದಿಯ ಸೀಟಿನಲ್ಲಿ ಕುಳಿತುಕೊಂಡಿದ್ದ. ಅಲ್ಲದೇ ಯುವತಿಯ ಸೊಂಟಕ್ಕೆ ಕೈ ಹಾಕಿ ಕಿರುಕುಳ ನೀಡುತ್ತಿದ್ದ. ಯುವತಿ ಈ ವಿಷಯವನ್ನು ತನ್ನ ಸಂಬಂಧಿಕರಿಗೆ ತಿಳಿಸಿದ್ದಾಳೆ. ತಕ್ಷಣ ಬಲ್ಲಾಳ್ ಬಾಗ್ ಎಂಬಲ್ಲಿ ಬಸ್ ತಡೆದ ಸಾರ್ವಜನಿಕರು ಹಾಗೂ ಯುವತಿ ಸಂಬಂಧಿಕರು ಯುವಕನನ್ನು ಬಸ್ ನಿಂದ ಕೆಳಗಿಳಿಸಿದ್ದಾರೆ.
ಬಳಿಕ ಧರ್ಮದೇಟು ನೀಡಿದ್ದಾರೆ. ಪಾಂಡವೇಶ್ವರ ಠಾಣೆ ಪೊಲೀಸರಿಗೆ ಯುವಕನನ್ನು ಒಪ್ಪಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!