ಉದಯವಾಹಿನಿ, ಬೆಂಗಳೂರು : ಇಂದಿನಿಂದ ಜೂನ್ 12ರ ವರೆಗೆ ರಾಜ್ಯದಲ್ಲಿ ಭಾರೀ ಗಾಳಿ-ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ರಾಜ್ಯದ 7 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಇಂದು ಆರೆಂಜ್ ಅಲರ್ಟ್ ಘೋಷಿಸಿದ್ದು, . ಒಟ್ಟು 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಭಾರೀ ಗಾಳಿಯೊಂದಿಗೆ(40-50kmph) ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ, ಉತ್ತರಕನ್ನಡ ಜಿಲ್ಲೆಗಳಿಗೆ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಕೊಟ್ಟಿದೆ.

Leave a Reply

Your email address will not be published. Required fields are marked *

error: Content is protected !!