ಉದಯವಾಹಿನಿ, ದೊಡ್ಡಬಳ್ಳಾಪುರ: ಇಡೀ ವರ್ಷ ಶಾಲಾ-ಕಾಲೇಜು ವಿದ್ಯಾರ್ಥಿಗಳು ತರಗತಿಗೆ ಹೋಗಲು ಸಮಯಕ್ಕೆ ಸರಿಯಾಗಿ ಬಸ್ ಸೌಲಭ್ಯ ಇಲ್ಲದೆ ಹಾಗೂ ಇರುವ ಬಸ್‌ಗಳು ಮಾರ್ಗ ಮಧ್ಯದಲ್ಲೇ ಕೆಟ್ಟು ನಿಲ್ಲುತ್ತಿದ್ದವು. ಇದರ ವಿರುದ್ಧ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಬಸ್ ತಡೆದು ಹಲವಾರು ಬಾರಿ ಪ್ರತಿಭಟನೆ ನಡೆಸಿದ್ದರು.
ಈಗ ಶಾಲೆ-ಕಾಲೇಜುಗಳು ಆರಂಭವಾಗಿದೆ. ಈ ಬಾರಿಯಾದರೂ ಯಾವುದೇ ಸಮಸ್ಯೆ ಇಲ್ಲದೆ ತರಗತಿಗೆ ತೆರಳಲು ಸೂಕ್ತ ಬಸ್ ವ್ಯವಸ್ಥೆ ಮಾಡಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.
ತಾಲ್ಲೂಕಿನ ವಿವಿಧ ಹಳ್ಳಿ ಹಾಗೂ ನಗರದಿಂದ ಉನ್ನತ ಶಿಕ್ಷಣಕ್ಕೆ ಬೆಂಗಳೂರಿನ ಕಾಲೇಜುಗಳಿಗೆ ಹೋಗಲು ಬೆಳಗ್ಗೆ ಬಸ್ ಸರಿಯಾದ ಸಮಯಕ್ಕೆ ಬರುತ್ತಿರಲಿಲ್ಲ. ಬರುವ ಒಂದೆರಡು ಬಸ್ ಜನರಿಂದ ತುಂಬಿರುತ್ತಿತು. ಇದರಿಂದ ಬೆಸತ್ತಿದ್ದ ವಿದ್ಯಾರ್ಥಿಗಳು ಸಾರಿಗೆ ವ್ಯವಸ್ಥೆ ಸಿಡಿದಿದ್ದರು.
ಬಸ್‌ಗಳನ್ನು ತಡೆದು, ಬಸ್ ನಿಲ್ದಾಣ ಮತ್ತು ಡಿಪೊದಲ್ಲಿದಲ್ಲಿ ಪ್ರತಿಭಟನೆ ನಡೆಸಿದ್ದರು. ಫಲವಾಗಿ ಸಂದರ್ಭದಲ್ಲಿ ಶಾಸಕರು ಹಾಗೂ ಕೆಎಸ್‌ಆರ್‌ಟಿಸಿ ಜಿಲ್ಲಾಧಿಕಾರಿ ಬಸ್ ನಿಲ್ದಾಣದಲ್ಲೇ ವಿದ್ಯಾರ್ಥಿಗಳೊಂದಿಗೆ ಸಭೆ ನಡೆಸಿದ್ದರು. ಅದರೂ ಕೆಎಸ್‌ಆರ್‌ಟಿಸಿ ಬಸ್ ಸಂಚಾರಿ ವ್ಯವಸ್ಥೆ ಮಾತ್ರ ಇಡೀ ವರ್ಷ ಸರಿದಾರಿಗೆ ಬರಲೇ ಇಲ್ಲ. 2024-25ನೇ ಸಾಲಿನ ಶೈಕ್ಷಣಿಕ ವರ್ಷ ಈಗಷ್ಟೆ ಪ್ರಾರಂಭವಾಗಿದ್ದು, ಶಾ-ಕಾಲೇಜುಗಳಲ್ಲಿ ತರಗತಿ ನಡೆಯುತ್ತಿವೆ. ಶೈಕ್ಷಣಿಕ ವರ್ಷದಲ್ಲಾದರೂ ವಿದ್ಯಾರ್ಥಿಗಳು ಸುಗಮವಾಗಿ ಶಾಲೆ-ಕಾಲೇಜಿಗೆ ಹೋಗಿ ಬರುವಂತಾಗಲಿದೆಯೆ ಎನ್ನುವ ಪ್ರಶ್ನೆ ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಕಾಡುತ್ತಿದೆ.
