ಉದಯವಾಹಿನಿ, ಬೆಂಗಳೂರು : ಪ್ರಯಾಣಿಕರ ಅನುಭವವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಕೆಎಸ್‌ಆರ್‌ಟಿಸಿಯು ತನ್ನ ನಿಯಮಗಳಲ್ಲಿ ಕೆಲ ಬದಲಾವಣೆಗಳನ್ನು ಮಾಡುತ್ತಿದ್ದು, ಈ ಮೂಲಕ ಪಾವತಿ ಮಾಡಿ ಟಿಕೆಟ್ ಖರೀದಿಸುವ ಅವಕಾಶ ಒದಗಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಕೆಎಸ್‌ಆರ್‌ಟಿಸಿ ಜೂನ್ 25ರಿಂದ ನಾಲ್ಕು ಡಿಪೋಗಳಲ್ಲಿ ಎಲೆಕ್ಟ್ರಾನಿಕ್ ಟಿಕೆಟಿಂಗ್ ಯಂತ್ರಗಳ (ಇಟಿಎಂ) ಪ್ರಾಯೋಗಿಕ ಯೋಜನೆಯನ್ನು ಪ್ರಾರಂಭಿಸಲಿದೆ. ಎಲ್ಲಾ ಕಂಡಕ್ಟರ್‌ಗಳಿಗೆ ತರಬೇತಿ ನೀಡಿದ ನಂತರ ಕೆಲವೇ ವಾರಗಳಲ್ಲಿ ಎಲ್ಲಾ ಬಸ್‌ಗಳಲ್ಲಿ ವ್ಯವಸ್ಥೆ ಜಾರಿಗೆ ಬರಲಿದೆ. ಸಾರಿಗೆ ನಿಗಮವು ಪ್ರತಿ ಸಾಧನಕ್ಕೆ ತಿಂಗಳಿಗೆ 645 ರೂ. ಬಾಡಿಗೆಯಂತೆ 10,245 ಇಟಿಎಂಗಳನ್ನು ತೆಗೆದುಕೊಂಡಿದೆ ಎಂದು ತಿಳಿದುಬಂದಿದೆ.
ಕೆಎಸ್‌ಆರ್‌ಟಿಸಿ ಎಂ.ಡಿ.ಅನ್ಬುಕುಮಾರ್ ಮಾತನಾಡಿ, ಪ್ರಾಯೋಗಿಕ ಯೋಜನೆ ಯಶಸ್ವಿಯಾದ ಬಳಿಕ ಈ ತಿಂಗಳ ಅಂತ್ಯದಲ್ಲಿ ಎಲ್ಲಾ ಬಸ್‌ಗಳಲ್ಲಿ ಈ ವ್ಯವಸ್ಥೆ ಜಾರಿಯಾಗಲಿದೆ. ಇದರಿಂದ ಚಿಲ್ಲರೆ ಸಮಸ್ಯೆ ಎದುರಾಗುವುದಿಲ್ಲ ನಿರ್ವಾಹಕರು ಚಿಲ್ಲರೆ ನೀಡಲಿಲ್ಲ ಎಂಬ ದೂರುಗಳು ಕೂಡ ಕಡಿಮೆಯಾಗಲಿದೆ. ಪ್ರಯಾಣಿಕರು ಮತ್ತು ಅವರ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳನ್ನು ಪಾವತಿಸಿ, ಟಿಕೆಟ್ ಖರೀದಿಸಬಹುದಾಗಿದೆ ಎಂದು ಹೇಳಿದ್ದಾರೆ. ಇದಕ್ಕೆ ಐದು ವರ್ಷ ಕಾಲದ ಒಪ್ಪಿಗೆ ನೀಡಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಕಂಪನಿಯು ಇಟಿಎಂಗಳಿಗೆ ಬ್ಯಾಕೆಂಡ್ ಮತ್ತು ಇಂರ್ಟೇಸ್ ಸಾಫ್‌ವೇರ್ ಅನ್ನು ಒದಗಿಸುತ್ತದೆ. ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಯಂತ್ರಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
