ಉದಯವಾಹಿನಿ, ಕುಂದಾಪುರ : ಕೊಲ್ಲೂರು ಮೂಕಾಂಬಿಕೆಯ ಸನ್ನಿಧಾನದಲ್ಲಿ ಶುಕ್ರವಾರ ಮೂಕಾಂಬಿಕೆ ದೇವಿಯ ಜನ್ಮಾಷ್ಟಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಜನ್ಮಾಷ್ಟಮಿಯ ಅಂಗವಾಗಿ ಬೆಳಿಗ್ಗೆಯಿಂದಲೇ ಕಟ್ಟುಕಟ್ಟಳೆ ಪೂಜೆಯ ಜತೆಗೆ ವಿಶೇಷ ಪೂಜೆ ಹಾಗೂ ಉತ್ಸವ ನಡೆಸಲಾಯಿತು. ರಾತ್ರಿ ದೇವಳದ ಪ್ರಾಂಗಣದ ಒಳ ಭಾಗದಲ್ಲಿ ದೇವಿಯ ಉತ್ಸವ ಮೂರ್ತಿಯನ್ನು ಕುಳ್ಳಿರಿಸಿ ರಥೋತ್ಸವ ನಡೆಸಲಾಯಿತು.
ಮಧ್ಯಾಹ್ನ ಹಾಗೂ ರಾತ್ರಿ ನಡೆದ ಅನ್ನ ಸಂತರ್ಪಣೆಯಲ್ಲಿ ಸಾವಿರಾರು ಜನ ಭಾಗವಹಿಸಿದ್ದರು.
ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಬಂದಿದ್ದ ಭಕ್ತರು ದೇವಿಯ ದರ್ಶನ ಪಡೆದುಕೊಂಡು ಋತ್ವಿಜರ ಮೂಲಕ ವಿವಿಧ ಪೂಜೆ ಸಲ್ಲಿಸಿದರು. ಜನ್ಮಾಷ್ಟಮಿ ಅಂಗವಾಗಿ ನವ ಚಂಡಿಕಾ ಯಾಗ ನಡೆಯಿತು. ದೇವಸ್ಥಾನದ ಆಡಳಿತಾಧಿಕಾರಿಯಾಗಿರುವ ಕುಂದಾಪುರ ಉಪವಿಭಾಗಾಧಿಕಾರಿ ಎಸ್‌.ಆರ್.ರಶ್ಮಿ, ಕಾರ್ಯನಿರ್ಹಣಾಧಿಕಾರಿ ಪ್ರಶಾಂತ್ ಶೆಟ್ಟಿ, ಸಾರ್ವಜನಿಕ ಸಂಪರ್ಕಾಧಿಕಾರಿ ಜಯಕುಮಾರ ನೇತೃತ್ವದಲ್ಲಿ ಉತ್ಸವ ನಡೆಯಿತು. ತಂತ್ರಿ ನಿತ್ಯಾನಂದ ಅಡಿಗ, ಋತ್ವಿಜರಾದ ಕೆ.ಎನ್.ಗೋವಿಂದ ಅಡಿಗ, ಕೆ.ಎನ್.ಸುಬ್ರಹ್ಮಣ್ಯ ಅಡಿಗ, ವಿಘ್ನೇಶ್ ಅಡಿಗ ನೇತೃತ್ವದಲ್ಲಿ ಧಾರ್ಮಿಕ ಪೂಜಾವಿಧಿಗಳು ನಡೆದವು.ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪಿ.ಎನ್. ದೇಸಾಯಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಾಜಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ತಮಿಳುನಾಡು ಕಾಂಗ್ರೆಸ್ ಮುಖಂಡ ಭಾರ್ಗವ್, ಬಿಜೆಪಿ ಮುಖಂಡ ಜಿ.ವಿ.ರಾಜೇಶ್, ಕೊಲ್ಲೂರು ದೇಗುಲದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾದ ವಂಡಬಳ್ಳಿ ಜಯರಾಮ್ ಶೆಟ್ಟಿ, ಡಾ.ಅಭಿಲಾಷ್ ಮಂಗಳೂರು, ಶರ್ಮಿಳಾ ಆಚಾರ್ಯ, ಜಯಾನಂದ ಹೋಬಳಿದಾರ್, ಗೋಪಾಲಕೃಷ್ಣ ನಾಡ, ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್‌ಕುಮಾರ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಮುಖಂಡ ಮುರಳೀಧರ ಶೆಟ್ಟಿ ಇಂದ್ರಾಳಿ, ಎನ್‌ಎಸ್‌ಐಯು ಮುಖಂಡ ಸುಜನ್‌ಕುಮಾರ ಶೆಟ್ಟಿ ಕುಂದಾಪುರ ದೇವಿಯ ದರ್ಶನ ಪಡೆದು, ಸೇವೆ ಸಲ್ಲಿಸಿದರು.

Leave a Reply

Your email address will not be published. Required fields are marked *

error: Content is protected !!